ಸೋಶಿಯಲ್ ಮೀಡಿಯಾದಲ್ಲಿ ಸಂದೇಶ ಪಾರ್ವಡ್ ಮಾಡುವುದು ಅಪರಾಧವಲ್ಲ…?

0

ಮಂಗಳೂರು  – ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೊಂದನ್ನು ಶೇರ್ ಮಾಡಿದ ನೆಪವೊಡ್ಡಿ ಕಾಂಗ್ರೆಸ್ ಪಕ್ಷದ ಯುವ ವಕೀಲರೊಬ್ಬರ ಸಹಿತ ನಾಲ್ವರನ್ನು ಬಂಧಿಸಿರುವುದು ಖಂಡನೀಯ ಎಂದು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ‌ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪೊಲೀಸರು ಅತಿರೇಕದ ವರ್ತನೆ ತೋರುತ್ತಿದ್ದಾರೆ. ಕೊಲೆ ಆರೋಪಿಗಳನ್ನು ಕೂಡಾ ಈ ರೀತಿಯಾಗಿ ಬಂಧಿಸಿ ಮಾಧ್ಯಮಕ್ಕೆ ಫೋಟೋಗಳನ್ನು ಬಿಡುಗಡೆ ಮಾಡುವುದಿಲ್ಲ. ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಕೆಲಸ ಮಾಡಬಾರದು. ಸೋಶಿಯಲ್ ಮೀಡಿಯಾದಲ್ಲಿ ಸಂದೇಶ ಪಾರ್ವಡ್ ಮಾಡುವುದು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಕೂಡಾ ಹೇಳಿದೆ. ಹೀಗಿರುವಾಗ ಪೊಲೀಸರು ವಿಶೇಷ ಆಸಕ್ತಿ ವಹಿಸಿ ರಾತ್ರೋರಾತ್ರಿ ಬಂಧಿಸುವ ಅಗತ್ಯ ಏನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply