ವಕ್ಫ್ ಇಲಾಖೆಯಿಂದಲೇ ಮಸೀದಿ, ಮದ್ರಸಗಳಿಗೆ ಅನುದಾನ ಬಿಡುಗಡೆ ಮಾಡಿ….!

0

ಮಂಗಳೂರು  – ಮಸೀದಿ ಮತ್ತು ಮದ್ರಸಗಳಿಗೆ ಧಾರ್ಮಿಕ ದತ್ತಿ ಇಲಾಖೆಯ ಅನುದಾನ ನೀಡುವುದು ಬೇಡ. ಬದಲಾಗಿ ವಕ್ಫ್ ಇಲಾಖೆಯಿಂದಲೇ ಮಸೀದಿ, ಮದ್ರಸಗಳಿಗೆ ಅನುದಾನ ಬಿಡುಗಡೆ ಮಾಡಿ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿ ಮತ್ತು ಮದ್ರಸಗಳ ಮೌಲವಿಗಳಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಆರ್ಥಿಕ ನೆರವು ನೀಡಲಾಗುತ್ತಿದೆ. ತುಷ್ಟೀಕರಣ ರಾಜಕೀಯದಿಂದಾಗಿ ವಕ್ಫ್ ಸಂಸ್ಥೆಗಳು ಹೀನಾಯ ಸ್ಥಿತಿಗೆ ತಲುಪಿದೆ. ಯಾವುದೇ ಕಾರಣಕ್ಕೂ ದೇವಸ್ಥಾನ, ದೈವಸ್ಥಾನದ ಹಣವನ್ನು ಮಸೀದಿ, ಮದ್ರಸಗಳಿಗೆ ನೀಡಬಾರದು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಥವಾ ವಕ್ಫ್ ಬೋರ್ಡ್‌ನಿಂದ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಈ ಹಿಂದೆ ಅನ್ವರ್ ಮಾಣಿಪ್ಪಾಡಿ ವಕ್ಫ್ ಹಗರಣಕ್ಕೆ ಸಂಬಂಧಿಸಿ ತಯಾರಿಸಿದ ವರದಿಯನ್ನು ಸದನದಲ್ಲಿ ಮಂಡಿಸಬೇಕು. ಈ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ಜರುಗಿಸಬೇಕು ಎಂದು ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಒತ್ತಾಯಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply