ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಜನಾರ್ದನ ಪೂಜಾರಿ

0

ಮಂಗಳೂರು

ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ  ಆಸ್ಪತ್ರೆಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ರು. ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಆಗಮಿಸಿದ ಜನಾರ್ದನ ಪೂಜಾರಿ ತಮ್ಮ ಅನಾರೋಗ್ಯದ ಮಧ್ಯೆಯೂ ಆಪ್ತನ ಆರೋಗ್ಯ ವಿಚಾರಿಸಲು ಆಗಮಿಸಿದರು. ಈ ಮೂಲಕ ಹಲವು ತಿಂಗಳ ಬಳಿಕ ಸಾರ್ವಜನಿಕವಾಗಿ ಜನಾರ್ದನ ಪೂಜಾರಿ ಕಾಣಿಸಿಕೊಂಡರು.

ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪೂಜಾರಿಯವರು, ಆಸ್ಕರ್ ಬಗ್ಗೆ ಮಾತನಾಡುತ್ತಾ ಗದ್ಗದಿತರಾದರು. ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿ ಕಣ್ಣೀರಿಟ್ಟ ಪೂಜಾರಿಯವರು ಆಸ್ಕರ್ ಆರೋಗ್ಯವಾಗಿ ಬರುತ್ತಾರೆ.‌ ದೇವರು ಅವರಿಗೆ ಸಹಾಯ ಮಾಡುತ್ತಾರೆ. ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply