ಮೈಸೂರು –  ಮೈಸೂರು ಮಹಾನಗರ ಪಾಲಿಕೆ ಮೇಯರ್ ಪಟ್ಟವನ್ನು ಜೆಡಿಎಸ್ ತನ್ನ ಮುಡಿಗೇರಿಸಿಕೊಂಡಿದೆ. ಮೈಸೂರು ನಗರಪಾಲಿಕೆಯ ಮೇಯರಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್‌ನ ಜಾಣ ನಡೆಯಿಂದ ಬಿಜೆಪಿ ಚೆಳ್ಳೆಹಣ್ಣು ತಿಂದಿದೆ.

ಕಳೆದ ಒಂದು ವಾರದಿಂದ ಮೇಯರ್ ಗಾಗಿ ಭಾರಿ ರಾಜಕೀಯ ಚರ್ಚೆಗಳು ಆರಂಭವಾಗಿದ್ದು, ಇಂದು ನಡೆದ ಮೇಯರ್ ಚುನಾವಣೆಯಲ್ಲಿ ಕೊನೆಯ ಗಳಿಗೆಯಲ್ಲಿ ಜೆಡಿಎಸ್ ಮೇಯರ್ ಪಟ್ಟ ಅಲಂಕರಿಸಿದೆ. ಮೇಯರ್ ಚುನಾಯಲ್ಲಿ ಕಡೆಯ ಕ್ಷಣದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಒಪ್ಪಂದದ ಅನುಸಾರ ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಅವರು ಮೇಯರ್‍ ಆಗಿ ಮತ್ತು ಕಾಂಗ್ರೆಸ್‌ನ ಅನ್ವರ್ ಬೇಗ್ ಅವರು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಬೆಂಬಲ ಪಡೆದು  ಇದೇ ಮೊದಲ ಬಾರಿಗೆ ಮೈಸೂರಿನ ಮೇಯರ್‌ ಸ್ಥಾನ ಸಂಪಾದಿಸಿಕೊಳ್ಳುವ ಬಿಜೆಪಿಯ ಕನಸು ಕೊನೆಗೂ ನನಸಾಗಲೇ ಇಲ್ಲಾ.

ಕಡೆಯ ಕ್ಷಣದ ರಾಜಕೀಯ ಹೊಂದಾಣಿಕೆ ಪರಿಣಾಮವಾಗಿ ಮೈಸೂರಿನ ಮೇಯರ್ ಆಗಿ ಜೆಡಿಎಸ್ ಸದಸ್ಯೆ ರುಕ್ಮಿಣಿ ಮಾದೇಗೌಡ ಆಯ್ಕೆಯಾದರೇ, ಉಪಮೇಯರ್ ಆಗಿ ಕಾಂಗ್ರೆಸಿನ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಎರಡೂ ಹುದ್ದೆಗಳಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಜೆಡಿಎಸ್ ಕೇವಲ ಮೇಯರ್‍ ಸ್ಥಾನಕ್ಕಷ್ಟೇ ತನ್ನ ಅಭ್ಯರ್ಥಿ ಕಣಕ್ಕಿಳಿಸಿತ್ತು. ಭಾರೀ ನಿರೀಕ್ಷೆಯೊಂದಿಗೆ ಕಣಕ್ಕಿಳಿದಿದ್ದ ಬಿಜೆಪಿಗೆ ಚಳ್ಳೇಹಣ್ಣು ತಿನ್ನಿಸುವಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಯಶಸ್ವಿಯಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply