ಕರ್ನಾಟಕ ಡಿಜಿಟಲ್ ಎಕನಾಮಿ ಮಿಷನ್ ಕೇಂದ್ರಕ್ಕೆ ಚಾಲನೆ

0

ಹುಬ್ಬಳ್ಳಿ  – ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಆರ್ಥಿಕತೆಯನ್ನು‌ 5 ಟ್ರಿಲಿಯನ್ ಏರಿಸುವ ಗುರಿ ಹೊಂದಿದ್ದಾರೆ. ಇದರಲ್ಲಿ ದೇಶದ ಐ.ಟಿ. ಬಿ.ಟಿ ವಲಯದಿಂದ ದೇಶದ ಆರ್ಥಿಕತೆಗೆ 1 ಟ್ರಿಲಿಯನ್ ಕೊಡುಗೆ ಇರಲಿದೆ. ಕರ್ನಾಟಕ ರಾಜ್ಯ ಡಿಜಿಟಲ್ ಎಕನಾಮಿಯಲ್ಲಿ ಮೊದಲ ಸ್ಥಾನದಲ್ಲಿದೆ.ಸದ್ಯ ರಾಜ್ಯದ ಐ.ಟಿ.ಬಿಟಿ ವಲಯದಿಂದ 54 ಬಿಲಿಯನ್ ಡಾಲರ್ ದೇಶದ ಆರ್ಥಿಕತೆಗೆ ಸೇರುತ್ತಿದೆ.

ಇದನ್ನು 300 ಬಿಲಿಯನ್ ಡಾಲರ್‌ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ.ಬೆಂಗಳೂರು ಟೆಕ್ ಸಮಿಟ್‌ಗಿಂತ ಪೂರ್ವಭಾವಿಯಾಗಿ ಹುಬ್ಬಳ್ಳಿಯಲ್ಲಿ ಬರುವ ಸೆಪ್ಟಂಬರ್ ಅಥವಾ ಅಕ್ಟೋಬರ್‌‌ನಲ್ಲಿ ಸಮಾವೇಶ ಆಯೋಜಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ,ಐಟಿ-ಬಿಟಿ,ವಿಜ್ಞಾನ ತಂತ್ರಜ್ಞಾನ,ಕೌಶಲ್ಯಾಭಿವೃದ್ಧಿ,ಜೀವನೋಪಾಯ ಹಾಗೂ ಉದ್ಯಮಶೀಲತೆ ಸಚಿವರಾದ ಡಾ. ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು.

ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿರುವ ದೇಶಪಾಂಡೆ ಫೌಂಡೇಶನ್ ಸ್ಟಾರ್ಟ್ ಅಪ್ ಕೇಂದ್ರದಲ್ಲಿ ಕರ್ನಾಟಕ ಡಿಜಿಟಲ್ ಎಕನಾಮಿ ಮಿಷನ್ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.  ರಾಜ್ಯದ ಅಭಿವೃದ್ಧಿಯಲ್ಲಿ ತಂತ್ರಜ್ಞಾನ ಹಾಗೂ ಆವಿಷ್ಕಾರವನ್ನು ಬಲವಾಗಿ ಅಳವಡಿಸಿಕೊಳ್ಳಲಾಗಿದೆ. ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಸ್ವಲ್ಪ ದಿನದಲ್ಲಿಯೇ ಕರ್ನಾಟಕ ಡಿಜಿಟಲ್ ಎಕನಾಮಿ ಮಿಷನ್ ಸ್ಥಾಪಿಸಲಾಗಿದೆ. ಸಾರ್ವಜನಿಕ ಸಹಭಾಗಿತ್ವದಡಿ ಸ್ಥಾಪಿಸಿರುವ ಸಂಸ್ಥೆಯಲ್ಲಿ ಸರ್ಕಾರ ಶೇ.49 ಹಾಗೂ ಬೇರೆ ಕಂಪನಿಗಳು ಶೇ.51 ರಷ್ಟು ಪಾಲು ಹೊಂದಿವೆ. ಕೆ.ಡಿ.ಈ.ಎಂ ಅಧ್ಯಕ್ಷರಾಗಿರುವ ವಿ.ವಿ.ನಾಯ್ಡು ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ. ಸರ್ಕಾರದಿಂದ ಸಂಪೂರ್ಣ ಅಧಿಕಾರ ನೀಡಲಾಗಿದೆ.

ಬಿಯಾಂಡ್ ಬೆಂಗಳೂರು ಕಲ್ಪನೆಯಡಿ, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡ ಬೆಳಗಾವಿ ಐ.ಟಿ ಕ್ಲಸ್ಟರ್‌ಗಳನ್ನು ಸ್ಥಾಪಿಸಲಾಗಿದೆ. ಬೆಂಗಳೂರು ಹೊರತು ಪಡಿಸಿ ರಾಜ್ಯದ ಇತರೆ ಭಾಗದಲ್ಲೂ ಐ.ಟಿ. ತಂತ್ರಜ್ಞಾನ ಸಂಸ್ಥೆಗಳನ್ನು ಸ್ಥಾಪಿಸಲು ಪ್ರೋತ್ಸಾಹ ನೀಡಲಾಗುವುದು. ಐ.ಟಿ. ಕಂಪನಿಗಳು ಮುಕ್ತವಾಗಿ ತಮ್ಮ ಯೋಜನೆಗಳನ್ನು ಸರ್ಕಾರದ ಮುಂದೆ ಇರಿಸಲು ಕೆ.ಡಿ.ಇ.ಎಂ ಸಹಾಯಕವಾಗಲಿದೆ. ಕೃಷಿ ವಾಣಿಜ್ಯ ಹಾಗೂ ಶಿಕ್ಷಣ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನ ಪ್ರವೇಶವಾಗಿದೆ. ಇದು ಜನರ ಜೀವನವನ್ನು ಸುಸ್ಥಿರ ಅಭಿವೃದ್ಧಿ ಕಡೆಗೆ ಕೊಂಡೊಯ್ಯಲಿದೆ ಎಂಬ ಆಶಾವಾದ ವ್ಯಕ್ತ ಪಡಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply