ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಮಾಹಿತಿ

0

ಧಾರವಾಡ ಜಿಲ್ಲೆಯಲ್ಲಿ 66 ಕೋವಿಡ್ ಸೆಂಟರ್‌ಗಳನ್ನು ತೆರೆಯಲಾಗಿದೆ. ಇದರಲ್ಲಿ 11 ನಗರ ಪ್ರದೇಶ ಹಾಗೂ 55 ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಒಟ್ಟು 2133 ಬೆಡ್‌ಗಳನ್ನು ಗ್ರಾಮೀಣ ಭಾಗದ ಕೋವಿಡ್ ಸೆಂಟರ್‌ಗಳಲ್ಲಿ ನಿರ್ಮಿಸಲಾಗಿದೆ. ಸದ್ಯ ಇದರಲ್ಲಿ 633 ಕೋವಿಡ್ ಸೋಂಕಿತರನ್ನು‌ ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟಾರೆ ಜಿಲ್ಲೆ ಹಾಗೂ ರಾಜ್ಯದ ಗ್ರಾಮೀಣ ಭಾಗದಲ್ಲಿ ಕೋವಿಡ್ ನಿರ್ವಹಣೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿ ಕಿಮ್ಸ್ ಆವರಣದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ‌ ಚಾಲನೆ ನೀಡಿ ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಹಾಗೂ ನರ್ಸಿಂಗ್ ಸಿಬ್ಬಂದಿ ಕೊರತೆ ಇತ್ತು. ಇದಕ್ಕೆ ಸರ್ಕಾರದಿಂದ ಸ್ಪಂದಿಸಿ, ಸ್ಥಳೀಯವಾಗಿ ವೈದ್ಯಾಧಿಕಾರಿಗಳು ಹಾಗೂ ನರ್ಸಿಂಗ್ ಸಿಬ್ಬಂದಿಗಳನ್ನು ನೇಮಕ ಮಾಡಲು ಅಧಿಕಾರ ನೀಡಲಾಗಿದೆ. ಇದರ ಆಧಾರದಲ್ಲಿ ನೇರವಾಗಿ ಸಂದರ್ಶನದ ಮೂಲಕ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇವರನ್ನು ಅಗತ್ಯ ಇರುವ ಕೋವಿಡ್ ಕೇಂದ್ರಗಳಲ್ಲಿ ನಿಯೋಜಿಸಲಾಗಿದೆ.

ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಜಿಲ್ಲೆಯ 7 ತಾಲೂಕುಗಳಿಗೆ ವೈದ್ಯರು ತಂಡವನ್ನು ನೇಮಿಸಲಾಗಿದೆ. ಕಿಮ್ಸ್‌ನಲ್ಲಿನ ಹೆಚ್ಚುವರಿ ವೈದ್ಯರು ಹಾಗೂ ಎಂ.ಬಿ.ಬಿ.ಎಸ್.ಪೂರ್ಣಗೊಳಿಸಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವೈದ್ಯರನ್ನು ಸಹ ಈ ತಂಡದಲ್ಲಿ ನಿಯೋಜಿಸಲಾಗಿದೆ. ಪ್ರತಿ ತಂಡಕ್ಕೂ ವಾಹನಗಳ ನೀಡಲಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರ, ಕೋವಿಡ್ ಕೇರ್ ಹಾಗೂ ಗ್ರಾಮಗಳಗೆ ತೆರಳಿ ಸೂಕ್ತ ಚಿಕಿತ್ಸೆ ನೀಡುವರು. ಕಿಮ್ಸ್ ಹಾಗೂ ಎಸ್.ಡಿ.ಎಂ.ನಿಂದ ಇನ್ನೂ‌ ಹೆಚ್ಚಿನ ವೈದ್ಯರನ್ನು ಗ್ರಾಮಗಳಿಗೆ ನಿಯೋಜಿಸಲಾಗುವುದು ಎಂದರು.

ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕಿತರು ಜವಬ್ದಾರಿ ಮರೆತು ನಾನಾ ಕಾರಣಗಳಿಂದ ಹಳ್ಳಿಗಳಲ್ಲಿ ಓಡಾಡುವ ಸಂದರ್ಭವಿರುತ್ತದೆ. ಹಾಗಾಗಿ ಇವರನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಲಾಗುತ್ತಿದೆ. ಇದುವರೆಗೂ ಹಳ್ಳಿಗಳಿಂದ 475 ಜನರು ಕೋವಿಡ್ ಕೇರ್ ಸೆಂಟರ್‌ಗಳ ದಾಖಲಾಗಿದ್ದಾರೆ.

ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರ ಮರಣದ ಸಂಖ್ಯೆ ಹೆಚ್ಚುತ್ತಿದೆ. ಕೋವಿಡ್ ಸೋಂಕಿತರ ಮರಣದ ಆಡಿಟ್ ನೆಡೆಸಲಾಗುತ್ತಿದೆ. ರಾಜ್ಯದಲ್ಲಿ ಒಟ್ಟಾರೆ ಶೇ.1 ರಷ್ಟು ಕೋವಿಡ್ ಮರಣದರ ಇರಬಹುದು ಎಂದು ಅಂದಾಜಿಸಲಾಗಿದೆ. ವಿರೋಧ ಪಕ್ಷದವರು ರಚನಾತ್ಮಕ ಸಲಹೆಯನ್ನು ಸರ್ಕಾರ ನೀಡಬೇಕು. ಪ್ರಧಾನಿ ಹಾಗೂ ಮುಖ್ಯಮಂತ್ರಿಗಳು ಕೋವಿಡ್ ನಿರ್ವಹಣೆಗೆ ಹಗಳಿರಲು ಶ್ರಮಿಸುತ್ತಿದ್ದಾರೆ.‌

ಜಿಲ್ಲೆಯಲ್ಲಿ 135 ಬ್ಲಾಕ್ ಫಂಗಸ್ ಪ್ರಕರಣಗಳಿವೆ. ಅಂಪೋಟೆರಿಸನ್ ಬಿ ಔಷಧ ಸರಬರಾಜು ನಿರಂತರವಾಗಿದೆ. ವೈದ್ಯರು ಬ್ಲಾಕ್ ಫಂಗಸ್‌ಗೆ ಸೂಕ್ತ ಶಸ್ತ್ರಚಿಕಿತ್ಸೆಯನ್ನು ಸಹ ನೀಡುತ್ತಿದ್ದಾರೆ. ಕೋವಿಡ್ ವ್ಯಾಕ್ಸಿನ್ ಸರಬರಾಜು ಆಧರಿಸಿ ಜಿಲ್ಲೆಯಲ್ಲಿ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಖಚಿತತೆಯ ಪ್ರಮಾಣ ಶೇ.14 ಇದೆ. ದಿನದಿಂದ ದಿನಕ್ಕೆ ಸೋಂಕು ಇಳಿಮುಖವಾಗುತ್ತಿದೆ. ಕೋವಿಡ್‌ ಹಾಗೂ ಸಾರಿ ಪ್ರಕರಣಗಳು ಒಂದೇ ರೀತಿಯ ಲಕ್ಷಣ ಹೊಂದಿರುತ್ತವೆ. ಸಾರಿ ಮೃತರಾದ ರೋಗಿಗಳ ವರದಿ ನೆಗೆಟಿವ್ ಬಂದರೆ, ಇದನ್ನು ಕೋವಿಡ್ ಮರಣದ ಸಂಖ್ಯೆಯಲ್ಲಿ ಸೇರಿಸುವುದಿಲ್ಲ ಎಂದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply