ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ

0

ಮಂಗಳೂರು

ಪಶ್ಚಿಮ ಘಟ್ಟದಲ್ಲಿ ಮಳೆ ಮುಂದುವರೆದಿದೆ. ಈ‌ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು,  ಸತತವಾಗಿ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಅಲ್ದೇ ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.

ನಿರಂತರ ಮಳೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಘಟ್ಟ ಪ್ರದೇಶ ಮತ್ತು ಕುಮಾರಧಾರ ಪರ್ವತಗಳಿಂದ ನೀರು ಹರಿದು ಬರುತ್ತಿದೆ. ಸ್ನಾನಘಟ್ಟ ಮುಳುಗಡೆಯಾದ ಹಿನ್ನೆಲೆಯಲ್ಲಿ ಸಮೀಪದಲ್ಲೇ ತೀರ್ಥ ಸ್ನಾನಕ್ಕೆ ಅವಕಾಶ ನೀಡಲಾಗಿದೆ. ಮಂಗಳೂರು ನಗರ ಸೇರಿದಂತೆ ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ, ಸುಬ್ರಹ್ಮಣ್ಯ, ಮೂಡಬಿದ್ರೆಯಲ್ಲಿ ಮಳೆ ಅಬ್ಬರ ಜೋರಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply