ಉಚಿತ ಅಂಬುಲೆನ್ಸ್ ನೀಡಿದ ಲಕ್ಷ್ಮಿ ಹೆಬ್ಬಾಳಕರ್

0

ಬೆಳಗಾವಿ –  ಕರೋನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಬೆಳಗಾವಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಉಚಿತ ಅಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿದ್ದಾರೆ. ಗ್ರಾಮೀಣ ವಿಧಾನಸಭಾ ಕ್ಷೇತ್ರದ ದೇಸೂರು ಗ್ರಾಮಕ್ಕೆ ಲಕ್ಷ್ಮೀ ತಾಯಿ ಫೌಂಡೇಷನ್ ಹಾಗೂ ಹರ್ಷ ಶುಗರ್ಸ್ ವತಿಯಿಂದ ಉಚಿತ ಅಂಬ್ಯುಲೆನ್ಸ್ ವಾಹನದ ಸೇವೆಯನ್ನು ಒದಗಿಸಲಾಗಿದೆ.

ಕೊರೋನಾ ಈ ಸಂಕಷ್ಟದ ಸಮಯದಲ್ಲಿ ಸೋಂಕಿನಿಂದಾಗಿ ಜನರು ತತ್ತರಿಸಿದ್ದು, ಜನರ ಆರೋಗ್ಯದ ವಿಶೇಷ ಕಾಳಜಿಯಡಿ ಈ ಸೇವೆ ಒದಗಿಸಲಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಜನರು ಭಯ ಪಡದೇ ಹೆಚ್ಚಿನ ಪ್ರಮಾಣದಲ್ಲಿ ಗಂಟಲು ದ್ರವಗಳ ಮಾದರಿಯ ನೀಡಿ ಪರೀಕ್ಷಿಸಿಕೊಳ್ಳಬೇಕು. ಜೊತೆಗೆ ಕೋವಿಡ್ ಲಸಿಕೆಗಳನ್ನು (ವ್ಯಾಕ್ಸಿನೇಷನ್‌) ತ್ವರಿತಗತಿಯಲ್ಲಿ ಹಾಕಿಸಿಕೊಳ್ಳಬೇಕು. ಅಲ್ಲದೆ ಮಾಸ್ಕ್, ಸ್ಯಾನಿಟೈಜರ್ ಗಳನ್ನು ಕಡ್ಡಾಯವಾಗಿ ಬಳಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಹಾಗೂ ಚಿಕ್ಕ ಮಕ್ಕಳ ಬಗ್ಗೆ ಜಾಗ್ರತೆ ಇರಲಿ ಎಂದು ಲಕ್ಷ್ಮಿ ಹೆಬ್ಬಾಳಕರ್ ಕ್ಷೇತ್ರದ ಜನರಲ್ಲಿ ವಿನಂತಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply