ನಾಯಕತ್ವ ಬದಲಾವಣೆ ಅಪ್ರಸ್ತುತ : ಡಾ|| ಬಸವಲಿಂಗ ಪಟ್ಟದ್ದೇವರು

0

ಭಾಲ್ಕಿ : ಕರ್ನಾಟಕ ಸರಕಾರದ ಘನ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ರಾಜ್ಯದಲ್ಲಿ ಜನಪರ-ಜೀವಪರ ಆಡಳಿತವನ್ನು ನಡೆಸುತ್ತಿದ್ದಾರೆ. ಇವರ ಅಧಿಕಾರದ ಅವಧಿಯಲ್ಲಿ ರಾಜ್ಯ ಪ್ರಗತಿಯನ್ನು ಸಾಧಿಸುತ್ತಿದೆ. ಅವರು ಜಾತ್ಯಾತೀತವಾಗಿ ಎಲ್ಲಾ ಸಮುದಾಯದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಯಲ್ಲಿ ತಂದಿದ್ದಾರೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಭಾಗಕ್ಕೆ ಅವರ ಕೊಡುಗೆ ಅಪಾರವಿದೆ. ಅವರು ಅನುಭವಮಂಟಪದ ನಿರ್ಮಾಣ ಕಾರ್ಯ ಪ್ರಾರಂಭಿಸಿದ್ದಾರೆ.

ಅವರು ಭಾರತೀಯ ಜನತಾ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತರಿಂದ ಮೇಲೆ ಬಂದು ಈ ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತಂದಿದ್ದಾರೆ. ತಮ್ಮ ಸಂಪೂರ್ಣ ಜೀವನವನ್ನೇ ಪಕ್ಷದ ಬೆಳವಣಿಗೆಗಾಗಿ ದುಡಿದಿದ್ದಾರೆ, ದುಡಿಯುತ್ತಿದ್ದಾರೆ. ಮುಂದೆಯೂ ಪಕ್ಷದ ಹಿತದೃಷ್ಟಿಯಿಂದ ಕಾರ್ಯ ಮಾಡುವ ಉತ್ಸಾಹ ಇವರಲ್ಲಿದೆ. ಅವರಿಗೆ ಜನಬೆಂಬಲದ ಜೊತೆಗೆ ಪಕ್ಷಾತೀತವಾಗಿ ಅನೇಕ ನಾಯಕರ ಬೆಂಬಲವೂ ಇದೆ.

ಆದರೂ ಸ್ವಪಕ್ಷದ ಕೆಲವು ನಾಯಕರು ಇವರನ್ನು ಅಧಿಕಾರದಿಂದ ಹೊರತೆಗೆಯುವ ಹುನ್ನಾರ ನಡೆಸುತ್ತಿದ್ದಾರೆ. ಇವರನ್ನು ಹೊರತೆಗೆದರೆ ರಾಜ್ಯದ ಪ್ರಗತಿಗೆ ಹಾಗೂ ಪಕ್ಷಕ್ಕೆ ಬಹಳಷ್ಟು ನಷ್ಟ ಆಗುತ್ತದೆ. ಮತ್ತೆ ರಾಜ್ಯದಲ್ಲಿ ಬಲಾಡ್ಯವಾಗಿರುವ ಲಿಂಗಾಯತ ಸಮುದಾಯವನ್ನು ಭಾರತೀಯ ಜನತಾ ಪಕ್ಷದಿಂದ ದೂರು ಸರಿಯುತ್ತದೆ. ಇದನ್ನು ಪಕ್ಷದ ಹಿರಿಯರು ಮರೆಯಬಾರದು. ಯಡಿಯೂರಪ್ಪನವರಿಗೆ ಪೂರ್ಣ ಅವಧಿ ಮುಗಿಯುವವರೆಗೆ ಮುಖ್ಯಮಂತ್ರಿಯಾಗಿ ಜನಸೇವೆ ಮಾಡಲು ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಕರ್ನಾಟಕ ರಾಜಕೀಯದಲ್ಲಿ ಮತ್ತೆ ಇತಿಹಾಸದ ಪುನರಾವರ್ತಿ ಆಗುತ್ತದೆ ಎಂದು ಹಿರೇಮಠ ಸಂಸ್ಥಾನದ ಡಾ|| ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply