ಬೆಂಗಳೂರು – ಆರನೇ ವೇತನ ಆಯೋಗ ಜಾರಿ ಮಾಡುವಂತೆ ನಡೆಯುತ್ತಿರುವ ಸಾರಿಗೆ ನೌಕರರು ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರಿಯಾದ ಬಸ್ ಸೌಲಭ್ಯವಿಲ್ಲದೇ ಜನರು ಕಂಗಾಲಾಗಿದ್ದಾರೆ. ಬಹುತೇಕ ಜನರು ಖಾಸಗಿ ಬಸ್ ಗಳ ಮೂಲಕ ಓಡಾಟ ನಡೆಸಿದ್ದಾರೆ. ಆದರೂ ಅದು ಸಮರ್ಪಕವಾಗಿ ಸೇವೆ ನೀಡಲು ಸಾಧ್ಯವಾಗುತ್ತಿಲ್ಲಾ.

ಈ ಹಿನ್ನೆಲೆಯಲ್ಲಿ ನಿನ್ನೆ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀ ಅಂಜುಂ ಪರ್ವೇಜ್ ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ, “ನೌಕರರ ಮುಷ್ಕರದಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ದಿನಕ್ಕೆ ₹20 ಕೋಟಿಗೂ ಹೆಚ್ಚು ನಷ್ಟವಾಗುತ್ತಿದೆ. ಮೊಲೇ ಲಾಕ್ ಡೌನ್ ಸಮಯದಲ್ಲಿ ನೂರಾರು ಕೋಟಿ ನಷ್ಟ ಅನುಭವಿಸಿರುವ ಸಾರಿಗೆ ಇಲಾಖೆ ಈಗ ಸಂಕಷ್ಟದಲ್ಲಿ ಇದೆ. ಇನ್ನು ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರದಿಂದ  ಜನರಿಗೆ ತೊಂದರೆಯಾಗುತ್ತಿದ್ದು, ಮಾತುಕತೆಯಿಂದ ಸಮಸ್ಯೆ ಬಗೆಹರಿಸಿಕೊಳ್ಳಬೇಕು” ಎಂದು  ಮನವಿ ಮಾಡಿದ್ದಾರೆ.

ಅದೇ ವೇಳೆಯಲ್ಲಿ ಮಾತನಾಡಿದ ಅವರು  ಸಾರಿಗೆ ಸಂಸ್ಥೆ ನಿಗಮಗಳಿಂದ ಒಟ್ಟು 20,000 ಹಾಗೂ ಬಿ.ಎಂ.ಟಿ.ಸಿ ಯಿಂದ 6,000 ಬಸ್ಸುಗಳು ಸೇರಿ ರಾಜ್ಯದಲ್ಲಿ ಒಟ್ಟು 26,000 ಬಸ್ ಗಳು ಸಂಚರಿಸುತ್ತಿದ್ದವು. ಇದನ್ನು ಸರಿದೂಗಿಸಲು 18,000 ಖಾಸಗವಾಹನಗಳಿಗೆ ಪರ್ಮೀಟ್ ಸರೆಂಡರ್ ರದ್ದುಪಡಿಸಿ ವಾಹನ ಚಲಾಯಿಸಲು ಅನುಮತಿ ನೀಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply