ಬಾಗಲಕೋಟೆ  ನವನಗರದಲ್ಲಿ ಒಟ್ಟು 6.95 ಕೋಟಿ ರೂ.ಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಭೂಮಿ ಪೂಜೆ ನೆರವೇರಿಸುವ ಮೂಲಕ ರವಿವಾರ ಚಾಲನೆ ನೀಡಿದರು.

  ಪ್ರಧಾನಮಂತ್ರಿ ಜನ ವಿಕಾಸ ಯೋಜನೆಯಡಿಯಲ್ಲಿ 2.35 ಕೋಟಿ ರೂ.ಗಳ ವೆಚ್ಚದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆಯ ಕಟ್ಟಡ ನಿರ್ಮಾಣ, 1.10 ಕೋಟಿ ರೂ.ಗಳ ವೆಚ್ಚದಲ್ಲಿ ಪುನರ್ವಸತಿ ಪುನ್ ನಿರ್ಮಾಣದ ಕೃಷ್ಣಾ ಮೇಲ್ದಂಡೆ ಯೋಜನೆ ಇಲಾಖೆಯ ಮಹಾವ್ಯವಸ್ಥಾಪಕರ ಕಚೇರಿಯ ನೆಲ ಮಹಡಿ ನವೀಕರಣ ಮತ್ತು ಮೊದಲನೇ ಮಹಡಿಯ ಕಟ್ಟಡ ನಿರ್ಮಾಣ,  ಡಿ.ಎಂ.ಎಫ್ ನಿಯಮದಡಿಯಲ್ಲಿ ಮಂಜೂರಾದ ನವನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ 1 ಕೋಟಿ ರೂ.ಗಳ ವೆಚ್ಚದಲ್ಲಿ ವಾಚನಾಲಯ, ಆರ್ಟ ಮತ್ತು ಕ್ರಾಪ್ಟ್ ಕೊಠಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು.

        ಪಂಚಾಯತ ರಾಜ್ ಸಂಸ್ಥೆಗಳ ಲೆಕ್ಕಶಿರ್ಷಿಕೆಯಡಿ ಮಂಜೂರಾದ 2.50 ಕೋಟಿ ರೂ.ಗಳ ವೆಚ್ಚದಲ್ಲಿ ಬಾಗಲಕೋಟೆ ತಾಲೂಕಾ ಪಂಚಾಯತ ಕಟ್ಟಡದ ಮೊದಲನೇ ಮಹಡಿ ಹಾಗೂ ಎರಡನೇ ಮಹಡಿ ನಿರ್ಮಾಣ ಮತ್ತು ನವೀಕರಣ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೀರಣ್ಣ ಚರಂತಿಮಠ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ ಅವರಿಗೆ ಸೂಚಿಸಿದರು.

 

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply