ಹೇಗೆ  ಕೆಲಸ ಮಾಡಬೇಕೆಂದು ಕಾಂಗ್ರೆಸ್ ನಿಂದ ಬಿಜೆಪಿ ಕಲಿಯಲಿ

0

ಮಂಗಳೂರು  – ಬಿಜೆಪಿ ಕೆಲಸ ಕಾರ್ಯಗಳನ್ನು ಹೇಗೆ ಮಾಡಬೇಕೆಂದು ಕಾಂಗ್ರೆಸ್ ನಿಂದ ಕಲಿಯಲಿ,  ಹೊರತು,  ಕಾಂಗ್ರೆಸ್ ನವರಿಗೆ ಬಿಜೆಪಿ ಜಿಲ್ಲಾಧ್ಯಕ್ಷರಿಂದ ಪಾಠ ಕಲಿಯುವ ಅಗತ್ಯ ಇಲ್ಲ ಎಂದು ಕಾಂಗ್ರೆಸ್‌ ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ತಿರುಗೇಟು ನೀಡಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡ್ ಲಸಿಕೆ ವಿಚಾರದಲ್ಲಿ ‌ಕಾಂಗ್ರೆಸ್ ರಾಜಕೀಯ ಮಾಡ್ತಿಲ್ಲ ಮತ್ತು ಅಪಪ್ರಚಾರ ಕೂಡ ಮಾಡಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಮಸ್ಯೆ ಉಲ್ಭಣಿಸಿದ ಸಂದರ್ಭದಲ್ಲಿ ಅದನ್ನು ನಿಭಾಯಿಸಲು ಅಸಮರ್ಥವಾಗಿದ್ದಾಗ ಆಡಳಿತ ಪಕ್ಷವಾದ ಬಿಜೆಪಿ ವೈಫಲ್ಯಗಳ ಬಗ್ಗೆ ವಿರೋಧ ಪಕ್ಷವಾಗಿ ನಾವು ಧ್ವನಿ ಎತ್ತಿದ್ದೇವೆ ಅಂದರು. ಬಿಜೆಪಿ ನಾಯಕರುಗಳು ಕಾಂಗ್ರೆಸ್ ಹೆಸರು ಹೇಳಿ ಜನರ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಬಿಜೆಪಿ ಕೋವಿಡ್ ಕಂಟ್ರೋಲ್ ಮಾಡ್ತಿಲ್ಲ. ಬದಲಾಗಿ ಮೋದಿಯ ಡೇಮೆಜ್ ಕಂಟ್ರೋಲ್ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ ಹರೀಶ್ ಕುಮಾರ್ ಆಡಳಿತ ವೈಫಲ್ಯ, ವ್ಯಾಕ್ಸಿಕ್ ಕೊರತೆ, ಬೆಡ್ ದಂಧೆ, ವಿದೇಶದಿಂದ ಆಕ್ಸಿಜನ್ ತರಿಸುತ್ತಿರೋದು ಬಿಜೆಪಿಯ ಸಾಧನೆ ಎಂದು ವ್ಯಂಗ್ಯವಾಡಿದರು. ಇನ್ನು ರಾಜ್ಯ ಸರ್ಕಾರ ಕೆಲಸ ಮಾಡಲು ವಿಫಲವಾದ ಕಾರಣ ಕಾಂಗ್ರೆಸ್ ಕೋವಿಡ್ ನಿಗ್ರಹಕ್ಕೆ  ವಾರ್ ರೂಂ ತೆರೆದು ಜನರಿಗೆ ಸಹಾಯ ‌ಮಾಡ್ತಿದೆ ಅಂದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply