ಬಾಗಲಕೋಟೆ- ರೈತರಿಗೆ ಅನುಕೂಲಕರವಾಗುವ ರೀತಿಯಲ್ಲಿ ತೋವಿವಿಯ ವಿಜ್ಞಾನಿಗಳು ಹೆಚ್ಚು ಹೆಚ್ಚು ಸಂಶೋಧನೆಗಳನ್ನು ನಡೆಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ತೋಟಗಾರಿಕಾ ವಿವಿಯ ಉದ್ಯಾನಗಿರಿಯಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ತೋಟಗಾರಿಕೆ ಮೇಳಕ್ಕೆ ಆನ್‍ಲೈನ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ತೋಟಗಾರಿಕಾ ಉತ್ಪಾಧನೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ 2ನೇ ಸ್ಥಾನದಲ್ಲಿದ್ದು, ತೋಟಗಾರಿಕೆ ಕ್ಷೇತ್ರದ ಸಾಧನೆಯಿಂದ ಭಾರತದ ತೋಟಗಾರಿಕೆ ತೋಟಗಾರಿಕೆ ರಾಜ್ಯ ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿದೆ. 44879 ಕೋಟಿ ರೂ.ಗಳ ಆದಾಯವನ್ನು ರಾಜ್ಯಕ್ಕೆ ನೀಡಿದೆ ಎಂದರು.

ತೋಟಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವು ತನ್ನ ಸ್ಥಾನವನ್ನು ಕಾಯ್ದುಕೊಂಡು ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ, ವಿಸ್ತರಣೆ ಹಾಗೂ ಇತರ ಮೂಲಕಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸಲು ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ತಿಳಿಸಿದರು.

About Author

Priya Bot

Leave A Reply