ಗಣಿ ನಾಡು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ

0

ಬಳ್ಳಾರಿ – ಕೊರೋನ ಸೋಂಕಿತರ ಸಂಖ್ಯೆ ದಿನ ದಿಂದ ದಿನಕ್ಕೆ ಇಳಿಮುಖ ಕಾಣುತ್ತಿರುವ ಹಿನ್ನೆಲೆ, ಬಳ್ಳಾರಿ ಜಿಲ್ಲಾಡಳಿತ ಕಠಿಣ ಲಾಕ್ ಡೌನ್ ನಿಯಮಗಳನ್ನ ಸಡಿಲಿಕೆ ಮಾಡಲು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಆದೇಶ ಮಾಡಿದ್ದಾರೆ. ಜೂನ್ 14 ರಿಂದ ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್ ನಿಯಮ ಸಡಿಲಿಕೆ ಮಾಡಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ರವರಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು, ಅಂಗಡಿ ಮುಂಗಟ್ಟುಗಳನ್ನ ಓಪನ್ ಮಾಡಲು ಅವಕಾಶ ಕೊಟ್ಟಿದೆ.

ಇನ್ನು ನೈಟ್ ಕಫ್ಯೂ‌೯ ಸೇರಿದಂತೆ ವಾರಾಂತ್ಯದ ಲಾಕ್ ಡೌನ್ ಅವಿಭಜಿತ ಜಿಲ್ಲೆಯಲ್ಲಿ ಜಾರಿ ಇರುತ್ತೆ. ಆದರೆ ಮುಖ್ಯವಾಗಿ ಜೂನ್ 30 ನೇ ತಾರೀಖಿನವರಗೂ ಅವಳಿ ಜಿಲ್ಲೆಯಲ್ಲಿ ಮದುವೆಗೆ ಅವಕಾಶ ಮಾತ್ರ ನೀಡಲಾಗಿಲ್ಲ. ಇನ್ನು ಲಾಕ್ ಡೌನ್ ಸಡಿಲಿಕೆ ಆದರೂ ಜನ್ರು ಸಾಮಾಜಿಕ ಅಂತರ, ಮಾಸ್ಕ, ಸ್ಯಾನಿಟೈಸ್ ಕಡ್ಡಾಯವಾಗಿ ಬಳಕೆ ಮಾಡಲೆ ಬೇಕು ಎಂದು ಆದೇಶ ಹೊರಡಿಸಲಾಗಿದೆ. ಇನ್ನೂ ಈ ಆದೇಶವು ಜೂನ್ 14 ರಿಂದ 21 ರ ವರಗೆ ಅನ್ವಯವಾಗುವಂತೆ  ಹೊರಡಿಸಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply