ಬಿಎಸ್ ವೈ ಅವರನ್ನು ಬೇಟಿ ಮಾಡಿದ ಎಂ ಬಿ ಪಾಟೀಲ್

0

ಬೆಂಗಳೂರು –  ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ 23 ಕೆರೆಗಳನ್ನು ತುಂಬಿಸುವ ಯೋಜನೆಗೆ ಅನುದಾನ ಒದಗಿಸುವಂತೆ ಕೋರಿ ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿಗಳು ಶ್ರೀ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿ ವಿನಂತಿಸಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಯಡಿಯೂರಪ್ಪನವರನ್ನು ಭೇಟಿ ಮಾಡಿ, ಚರ್ಚಿಸಿದ ಎಂ.ಬಿ.ಪಾಟೀಲ್‍ರವರು ಭೀಮಾನದಿ ಪಾತ್ರದಲ್ಲಿ ನೀರಿನ ಕೊರತೆಯ ಕಾರಣ ಇಂಡಿ ಭಾಗದ ಕೆಲವು ಪ್ರದೇಶಕ್ಕೆ ನೀರಾವರಿ ಸೌಕರ್ಯ ಕಲ್ಪಿಸಲಾಗಿಲ್ಲ. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಕೃಷ್ಣಾ ನದಿ ನೀರನ್ನು ಎತ್ತಿ, ಭೀಮಾ ಭಾಗದ ಈ ಹಳ್ಳಿಗಳಿಗೆ ನೀರೊದಗಿಸಲು ಏಷ್ಯಾದಲ್ಲಿಯೇ ಅತೀ ದೊಡ್ಡ 16ಕಿ.ಮೀ ಉದ್ದದ ತಿಡಗುಂದಿ ಅಕ್ವಾಡಕ್ಟ್ ನಿರ್ಮಿಸಿ, ಅಲ್ಲಿಂದ ಕಾಲುವೆ ಮೂಲಕ ಇಂಡಿ ಭಾಗದ 65ಸಾವಿರ ಎಕರೆ ಪ್ರದೇಶ ನೀರಾವರಿ ಸೌಕರ್ಯ ಹಾಗೂ 23ಕೆರೆಗಳನ್ನು ತುಂಬಿಸಲು ಯೋಜನೆ ರೂಪಿಸಲಾಗಿದೆ.

ಅಕ್ವಾಡಕ್ಟ್ ಹಾಗೂ ಕಾಲುವೆ ಕಾರ್ಯ ಮುಗಿದಿದ್ದು, ನೀರು ಹರಿಸಲಾಗಿದೆ. ತಿಡಗುಂದಿ ಕಾಲುವೆಯಿಂದ ಲಿಫ್ಟ್ ಮಾಡಿ 23ಕೆರೆಗಳನ್ನು ತುಂಬಿಸುವ ಯೋಜನೆಗೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ದೊರೆತಿದ್ದರೂ ಹಣಕಾಸಿನ ಲಭ್ಯತೆ ಇಲ್ಲದ ಕಾರಣ ಕಾಮಗಾರಿ ಆರಂಭಗೊಂಡಿಲ್ಲ. ಇಂಡಿ ತಾಲೂಕಿನ ಅತೀ ಬರಗಾಲ ಪೀಡಿತ ಈ ಹಳ್ಳಿಗಳು ಕುಡಿಯುವ ನೀರು ಹಾಗೂ ನೀರಾವರಿಯಿಂದ ವಂಚಿತರಾಗಿ ತತ್ತರಿಸಿದ್ದಾರೆ. ಆದರೂ ಇಲ್ಲಿನ ಜನ ಅಲ್ಪನೀರಿನಲ್ಲಿಯೇ ವಿಶ್ವಪ್ರಸಿದ್ದ ನಿಂಬೆ, ದಾಳಿಂಬೆ ಹಾಗೂ ದ್ರಾಕ್ಷಿ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಇವರಿಗೆ ನೆರವಾಗಲು ತಾವುಗಳು ಈ ಕುರಿತು ವಿಶೇಷ ಗಮನ ಹರಿಸಿ, ಹಣಕಾಸಿನ ನೆರವು ಒದಗಿಸಿದರೆ ಇಂಡಿ ಭಾಗ ನೀರಾವರಿಗೆ ಒಳಪಡುತ್ತದೆ ಹಾಗೂ ತಿಡಗುಂದಿ ಅಕ್ವಾಡೆಕ್ಟ್ ನಿರ್ಮಿಸಿದ ಉದ್ದೇಶವು ಸಫಲವಾಗುತ್ತದೆ ಎಂದು ಎಂ.ಬಿ.ಪಾಟೀಲ್ ಮುಖ್ಯಮಂತ್ರಿಗಳಲ್ಲಿ ವಿನಂತಿಸಿದರು.ಇದಕ್ಕೆ ಸಹಮತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪನವರು ಸಕಾರಾತ್ಮಕವಾಗಿ ಸ್ಪಂದಿಸಿ, ಅಗತ್ಯ ಆರ್ಥಿಕ ನೆರವು ಒದಗಿಸಲು ಕ್ರಮ ಜರುವುದಾಗಿ ಭರವಸೆ ನೀಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply