ಹುಬ್ಬಳ್ಳಿ- ಮನೆಯವರ ಜೊತೆ ಜಗಳವಾಡಿದ ವ್ಯಕ್ತಿಯೊಬ್ಬ, ಮನೆಯಿಂದ ಎಲ್ಲರನ್ನು ಹೊರ ಹಾಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ, ಹಳೇ ಹುಬ್ಬಳ್ಳಿಯ ಬೇಪಾರಿ‌ ಪ್ಲಾಟ್ ನಲತಲಿ ನಡೆದಿದೆ‌.

ಅಮೀರ್ ಮಹ್ಮದಾಲಿ ಮನಿಯಾರ್ (28) ನೇಣಿಗೆ ಶರಣಾದ ವ್ಯಕ್ತಿ, ನಿನ್ನೆ ರಾತ್ರಿ ಪತ್ನಿಯೊಂದಿಗೆ ಸಾಲದ ವಿಚಾರವಾಗಿ ಜಗಳ ಮಾಡಿದ್ದಾನೆ. ತಡರಾತ್ರಿ ಮಡದಿ, ಮಕ್ಕಳನ್ನು ಮನೆಯಿಂದ ಹೊರಹಾಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ.

ಆದ್ರೆ ಆತ್ಮಹತ್ಯೆಗೆ ಸಾಲ ಕಾರಣವಾ  ಅಥವಾ ಘಟನೆಗೆ ಬೇರೆ ಏನಾದರೂ ಕಾರಣವಿರಬಹುದೇ ಎಂಬುದನ್ನು  ಪೊಲೀಸರ ತನಿಖೆಯಿಂದಲೇ ಹೊರಬೀಳಬೇಕಿದೆ. ಸುದ್ದಿ ತಿಳಿಯುತ್ತಿದಂತೆ ಹಳೇ ಹುಬ್ಬಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply