ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ, ಇಂದು ಕಂಪ್ಲಿಯಲ್ಲಿ ನಡೆದ ಬೃಹತ್ ಪ್ರತಿಭಟನೆ

0

ಬಳ್ಳಾರಿ – ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಶಾಸಕ ಜೆ.ಎನ್.ಗಣೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟ್ಟಣದ ಪುರಸಭೆ ಎದುರುಗಡೆಯ ಭಾರತ್ ಪೆಟ್ರೋಲ್ ಬಂಕ್ ಬಳಿಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು.

ನಂತರ ಶಾಸಕ ಗಣೇಶ್ ಮಾತನಾಡಿ, ‘ಸುಳ್ಳು ಹೇಳುತ್ತಲೇ ಬಿಜೆಪಿ ನಾಯಕರು ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ. ಮೊದಲೇ ಜನರು ಕೊರೊನಾ, ಲಾಕ್‌ಡೌನ್‌ನಿಂದ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಅಂಥದರಲ್ಲಿ ಅಗತ್ಯ ವಸ್ತುಗಳ ಬೆಲೆ ದಿನ ಕಳೆದಂತೆ ಗಗನಕ್ಕೇರುತ್ತಿದೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ಬೆಲೆ 100ಕ್ಕೆ ಏರಿಕೆಯಾಗಿದೆ. ಇದೇ ಪ್ರಧಾನಿ ನರೇಂದ್ರ ಮೋದಿ ಸಾಧನೆ ಶೂನ್ಯವಾಗಿದೆ. ರಾಜ್ಯ, ದೇಶದಲ್ಲಿ ಬಿಜೆಪಿ ಆಡಳಿತ ಸಂಪೂರ್ಣ ವಿಫಲವಾಗಿದೆ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ಬಡವರು ಒಪ್ಪೊತ್ತಿನ ಊಟಕ್ಕೂ ಪರದಾಡಬೇಕಾಗುತ್ತದೆ. ಕೊರೊನಾದಿಂದ ಜನರು ನೆಮ್ಮದಿ ಕಳೆದುಕೊಂಡಿದ್ದಾರೆ. ‘ಪೆಟ್ರೋಲ್‌, ಡಿಸೇಲ್‌ ಬೆಲೆ ನಿತ್ಯವೂ ಹೆಚ್ಚುತ್ತಿದ್ದು, ಇದರಿಂದ ಜನ ಸಾಮಾನ್ಯರು ವಾಹನಗಳನ್ನು ನಡೆಸುವುದು ಬಿಡಬೇಕಾಗಿದೆ. ಇಂತಹ ದುರಾಡಳಿತದಿಂದ ದೇಶದ ಜನರ ಮೇಲೆ ಪೆಟ್ರೋಲ್, ಡಿಸೇಲ್ ಮತ್ತು ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿ ತಟ್ಟುವಂತಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.

ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಟಗಿ ಬಸವರಾಜಗೌಡ ಮಾತನಾಡಿ, ಅಂತಿಮವಾಗಿ ಇದರ ಹೊರೆ ಜನಸಾಮಾನ್ಯರೇ ಹೊರುವಂತಾಗಿದೆ. ಜನರ ಬದುಕು ದುರ್ಬರವಾಗುತ್ತಿದೆ. ಸರ್ಕಾರವೇ ಜನರನ್ನು ಸಂಕಷ್ಟಕ್ಕೆ ತಳ್ಳುತ್ತಿದೆ. ದೇಶದ ಜನರ ಮೇಲೆ ಸವಾರಿ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮುಂಬರುವ ಚುನಾವಣೆಗಲ್ಲಿ ತಕ್ಕಪಾಠ ಕಲಿಸಲಿದ್ದಾರೆ. ಇಂತಹ ದುರಾಡಳಿತದ ಸರ್ಕಾರಗಳಿಗೆ ಅಧಿಕಾರ ನೀಡಬಾರದು ಎಂದರು.

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply