ರಾಯಚೂರು – ಇದೇ ಎಪ್ರಿಲ್ 17 ರಂದು ಮಸ್ಕಿ ಮೀಸಲು ವಿಧಾನ ಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರತಾಪ್ ಗೌಡ ಪಾಟೀಲ ಪರವಾಗಿ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ ಅವರು ಪ್ರಚಾರ ಮಾಡಿದ್ದಾರೆ. ಇಂದು ಉಪ ಚುನಾವಣೆಯ ಪ್ರಚಾರದ ಭಾಗವಾಗಿ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರನ್ನು ಬೇಟಿ ಮಾಡಿ ಮತಯಾಚನೆ ಮಾಡಿದ್ದಾರೆ.

ಖುದ್ದು ಜನರನ್ನು ಬೇಟಿ ಮಾಡಿದ ಅವರು  ಭಾರತೀಯ ಜನತಾ ಪಕ್ಷ ಹಾಗೂ ರಾಜ್ಯ ಸರ್ಕಾರ  ಕೈಗೊಂಡಿರುವ ಜನಪರ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಬೇಕು ಎಂದು ಕರೆ ನೀಡಿದರು.  ಹಿಂದುಳಿದಿರುವ ಮಸ್ಕಿ ಕ್ಷೇತ್ರದ ಅಭಿವೃದ್ದಿಗೆ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಬದ್ದವಾಗಿದೆ ಎಂದು ಹೇಳಿದರು.  ಕೊಪ್ಪಳದ ಮಾಜಿ ಸಂಸದರಾರ ಶ್ರೀ ಕೆ.ವಿರೂಪಾಕ್ಷಪ್ಪ ಸೇರಿದಂತೆ ಬಿಜೆಪಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply