ಬೆಂಗಳೂರು – ಸಚಿವ ಅರವಿಂದ್ ಲಿಂಬಾವಳಿ ಅವರು ರಾಜೀನಾಮೆ ನೀಡಿದ್ದಾರೆ. ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅರವಿಂದ ಲಿಂಬಾವಳಿ ಅವರು ತಮ್ಮ ರಾಜೀನಾಮೆ ಪತ್ರ  ಸಲ್ಲಿಸಿದ್ದಾರೆ.  ಕಳೆದ ಬಾರಿ ಸಚಿವ ಸಂಪುಟ ಪುನರ್ ಚನೆ ವೇಳೆಯಲ್ಲಿ ಸಚಿವರಾಗಿ ಅರವಿಂದ ಲಿಂಬಾವಳಿ ಸಚಿವ ಸ್ಥಾನವನ್ನು ಅಲಂಕರಿಸಿದ್ದರು. ಬಿಜೆಪಿ ಪಕ್ಷದಲ್ಲಿ  ಒಬ್ಬ ವ್ಯಕ್ತಿ, ಒಂದು ಹುದ್ದೆ ಎಂಬ ಸಿದ್ಧಾಂತದ ಹಿನ್ನೆಲೆಯಲ್ಲಿ ,  ತಾವು ಸಚಿವ ಸ್ಥಾನ ಅಲಂಕರಿಸಿರುವ ಕಾರಣ ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ. ಒಬ್ಬ ವ್ಯಕ್ತಿ ಒಂದು ಹುದ್ದೆ ನಿಯಮಕ್ಕೆ ಗೌರವ ನೀಡುವ ಹಿನ್ನಯಲ್ಲಿ ರಾಜೀನಾಮೆ ನೀಡುವುದಾಗಿ ತಮ್ಮ ರಾಜೀನಾಮೆ ಪತ್ರದಲ್ಲಿ ಲಿಂಬಾವಳಿ ತಿಳಿಸಿದ್ದಾರೆ

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply