ಬೆಳಗಾವಿ- ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ಉಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಿದ್ದ ಹಿರಿಯ ನ್ಯಾಯವೇತ್ತ ಜಸ್ಟಿಸ್ ರಾಮಾಜೋಯೀಸ್ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕರಾಗಿದ್ದ ಶ್ರೀ ರಾಮಾಜೋಯೀಸ್ ಅವರು ರಾಜ್ಯ ಸಭಾ ಸದಸ್ಯರಾಗಿ ಕೆಲಸ ನಿರ್ವಹಿಸಿದ್ದರು. ಇವರ  ದಣಿವರಿಯದ ಕೆಲಸವನ್ನು ಮೆಚ್ಚಿ, ಕೇಂದ್ರ ಸರ್ಕಾರವು ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳ ರಾಜ್ಯಪಾಲರನ್ನಾಗಿ ನೇಮಿಸಿತ್ತು. ಇಂತಹಾ ಧೀಮಂತ ನಾಯಕರನ್ನು ಕಳೆದುಕೊಂಡಿದ್ದು ದುಃಖದ ಸಂಗತಿಯಾಗಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಶ್ರೀ ರಾಮಾಜೋಯೀಸ್ ಅವರು ಅಪಾರ ಕಾರ್ಯಕರ್ತರನ್ನು, ವಕೀಲ ಸಮೂಹವನ್ನು ಬಿಟ್ಟು ಅಗಲಿದ್ದು, ಅವರ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಮತ್ತು ಅವರ ಅಗಲಿದ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಸಚಿವ ರಮೇಶ್ ಜಾರಕಿಹೊಳಿ‌, ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.

About Author

Priya Bot

Leave A Reply