ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ ರಾಜ್ಯಕ್ಕೆ ಮಾದರಿ : ಎಂ.ಪಿ.ವೀಣಾ.

0

ದಾವಣಗೆರೆ – ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆ ಎದುರಾಗಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರು ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರು ಆಗಿರುವ ಶಾಮನೂರು ಶಿವಶಂಕರಪ್ಪ ಅವರು ಜಿಲ್ಲೆಯಲ್ಲಿ ಸ್ವಂತ ಖರ್ಚಿನಲ್ಲಿ 60 ಸಾವಿರ ಲಸಿಕೆ ವಿತರಣೆ ಮಾಡುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ ಎಂ.ಪಿ.ವೀಣಾ ಮಹಾಂತೇಶ್ ಚರಂತಿಮಠ ಅಭಿಪ್ರಾಯ ಪಟ್ಟಿದ್ದಾರೆ.

ಯಾರೋ‌ ಬಿಜೆಪಿಯ ಕೆಲವರು ಶಾಮನೂರು ಶಿವಶಂಕರಪ್ಪನವರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಬಗ್ಗೆ ವಿನಾ ಕಾರಣ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಅಂತಹವರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ವಿಲ್ಲ ಎಂದ ಅವರು ಮಾಡುತ್ತಿರುವ‌ ಇಂತಹ ಜನಪರ ಕಾರ್ಯಗಳೆ ಅಂತಹವರಿಗೆಲ್ಲ ತಕ್ಕ ಉತ್ತರ. ಬಿಜೆಪಿಯ ಯಾವ ಶಾಸಕರು ಹೀಗೆ 60ಸಾವಿರ ಲಸಿಕೆ ನೀಡಲು ಮುಂದಾಗಿದ್ದಾರೆ ಹೇಳಿ ಎಂದು ಶಾಮನೂರು ಶಿವಶಂಕರಪ್ಪನವರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ಸಮರ್ಥಿಸಿಕೊಂಡರು.

ಲಸಿಕೆ ವಿತರಣೆಯಲ್ಲಿ ಕೇಂದ್ರ ಮತ್ತು ಬಿಜೆಪಿ ಸರ್ಕಾರಗಳು ವಿಫಲವಾಗಿವೆ ಎಂದ ಅವರು ಕಾಂಗ್ರೆಸ್ ಎಂ.ಎಲ್.ಎ.ಗಳು ತಮ್ಮ ಕ್ಷೇತ್ರ ಅಭಿವೃದ್ಧಿ ನಿಧಿಯಿಂದ ತಲಾ 90ಕೋಟಿ ರೂ.ಗಳನ್ನು ಹಾಗೂ ಕಾಂಗ್ರೆಸ್ ಪಕ್ಷ 10ಕೋಟಿ ರೂಂ.ಗಳನ್ನು  ಲಸಿಕೆಗೆ ನೀಡುವುದಾಗಿ  ಕಾಂಗ್ರೆಸ್ ಪಕ್ಷ ಯೋಜನೆಯನ್ನು ರೂಪಿಸಿದೆ. ಆದರೆ ರಾಜ್ಯ ಸರ್ಕಾರ ಇದಕ್ಕೆ ಇನ್ನೂ ಅನುಮತಿ ನೀಡುತ್ತಿಲ್ಲ .ಈ ಬಗ್ಗೆ ಈಗಾಗಲೇ ನಮ್ಮ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಮಾನ್ಯ ಶ್ರೀಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಮಾನ್ಯ ಶ್ರೀಡಿ.ಕೆ.ಶಿವಕುಮಾರ್ ಅವರುಗಳು ಬಿಜೆಪಿ ಸರಕಾರಕ್ಕೆ  ಲಸಿಕೆ ಹಾಕಿಸಲು ಸಾಧ್ಯವಿಲ್ಲವಾದರೆ ಕಾಂಗ್ರೆಸ್  ಪಕ್ಷ ಲಸಿಕೆ ಹಾಕಿಸಿ ಕೊಳ್ಳಲು ಸಹಾಯ ಮಾಡುತ್ತದೆ  ಎಂದು ತಿಳಿಸಿದ್ದಾರೆ. ಹಾಗೆಯೇ ಇಂದು ದಾವಣಗೆರೆಯಲ್ಲಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಶಾಮನೂರು ಶಿವಶಂಕರಪ್ಪ ರವರ ಸಾರಥ್ಯದಲ್ಲಿ ಲಸಿಕೆ ಅಭಿಯಾನ ಆರಂಭವಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply