ಬೊಬ್ಬುಕುಂಟೆ, ಕಮ್ಮರಚೇಡು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ನಾಗೇಂದ್ರ.

0

ಬಳ್ಳಾರಿ

ಬಳ್ಳಾರಿ ಗ್ರಾಮೀಣ ಶಾಸಕರಾದ  ಬಿ.ನಾಗೇಂದ್ರ ಅವರು ಬೊಬ್ಬುಕುಂಟೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಅವರು ಸೂಚನೆ ನೀಡಿದರು. ಇದಾದ ನಂತರ ಶಾಸಕ ನಾಗೇಂದ್ರ ಅವರು ಕಮ್ಮರಚೇಡು ಗ್ರಾಮದ ಮಾಳಗಡ್ಡ ಕ್ಯಾಂಪ್ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದರು.

ಈ ಮಾಳಗಡ್ಡ ಕ್ಯಾಂಪಿಗೆ ಮೂರು ಶಾಲಾ ಕೊಠಡಿ ಹಾಗೂ ಕಾಂಪೌಂಡ್ ನಿರ್ಮಾಣ ಮಾಡುವ ಕುರಿತು ಪರಿಶೀಲನೆ ನಡೆಸಿದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಡಿ ಅನುದಾನ ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply