ರಾಜೀನಾಮೆ ಪತ್ರ ಕೈಲಿ ಇಡ್ಕೊಂಡು ದೆಹಲಿಗೆ ಹೋಗಿದ್ದ ಯಡಿಯೂರಪ್ಪ..!

0

ಬೆಂಗಳೂರು

ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನುವ ಆಡಿಯೋ ಒಂರು ವೈರಲ್ ಆಗಿದೆ. ಹೀಗಾಗಿ ಸಿ ಎಮ್ ಬದಲಾವಣೆ ಮಾಡುತ್ತಾರೆ ಎನ್ನುವ ಸುದ್ದಿಗೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ. ನಳೀನ್ ಕುಮಾರ್ ಅವರು ಮಾತನಾಡಿದ್ದಾರೆ ಎನ್ನಲಾದ 47 ಸೆಂಕಂಡ್ ಆಡಿಯೋ ಸಾಕಷ್ಟು ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ರಾಜ ರಾಜಕಾರಣದಲ್ಲಿ ಮಿಂಚಿನ ಸಂಚಲನ ಸೃಷ್ಟಿಯಾಗಿದೆ.

ತುಳುವಿನಲ್ಲಿ ವ್ಯಕ್ತಿಯೊಬ್ಬರ ಜೊತೆ ಕಟೀಲ್ ಮಾತನಾಡಿದ್ದು, ಈ ಸಂಭಾಷಣೆಯಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆ ಆಗಲಿದ್ದಾರೆ ಎಂದು ಹೇಳಿದ್ದಾರೆ. 47 ಸೆಂಕಡ್ ಇರುವ ಆಡಿಯೋದಲ್ಲಿ ಏನ್ ಇದೆ‌.

ಯಾರಿಗೂ ಹೇಳಬೇಡ ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಅವರ ಟೀಮ್‍ನ್ನು ತೆಗೆಯುತ್ತೇವೆ. ಹೊಸ ತಂಡವನ್ನು ಕಟ್ಟುತ್ತೇವೆ. ಈಗ ಸದ್ಯಕ್ಕೆ ಯಾರಿಗೂ ಹೇಳಬೇಡ. ದೆಹಲಿಯಿಂದಲೇ ಎಲ್ಲುವೂ ನಡೆಯುತ್ತೆ ಎಂದು ತಮ್ಮ ಆಪ್ತರೊಬ್ಬರ ಬಳಿ ನಳೀನ್ ಕುಮಾರ್ ಕಟೀಲ್ ಮಾತನಾಡಿರುವ ಆಡಿಯೋ ವೈರಲ್ ಆಗಿದೆ.

ಕಳೆದ ಹಲವಾರು ದಿನಗಳಿಂದ ನಡೆಯುತ್ತಿರು ನಾಯಕತ್ವ ಬದಲಾವಣೆ ಕುರಿತಾದ ಚರ್ಚೆಗೆ ಮತ್ತಷ್ಟು ಪುಷ್ಟಿ ಬಂದಿದೆ. ಇನ್ನು ಸಿ ಎಮ್ ದೆಹಲಿಗೆ ಹೋಗಿದ್ದು ರಾಜೀನಾಮೆ ಕುಡಲು ಎನ್ನುವ ಮಾತ ಸಹ ಈಗ ಕೇಳಿ ಬರುತ್ತಿವೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply