ಬಳ್ಳಾರಿ- ನೂತನ ವಿಜಯನಗರ ಜಿಲ್ಲೆಯನ್ನು ಆರ್ಟಿಕಲ್ 371 ಜೆ ಗೆ ಸೇರಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದು, ಇದು ಈ ಭಾಗದ ಜನತೆಯ ಬಹುದಿನಗಳ ಹೋರಾಟಕ್ಕೆ ಸಂದ ದಿಗ್ವಿಜಯವಾಗಿದೆ ಎಂದು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆನಂದ್ ಸಿಂಗ್ ಹರ್ಷ ವ್ಯಕ್ತಪಡಿಸಿದ್ದಾರೆ.  ನೂತನ ವಿಜಯನಗರ ಜಿಲ್ಲೆಯನ್ನು ಆರ್ಟಿಕಲ್ 371 ಜೆ ಗೆ ಸೇರಿಸಿ ರಾಜ್ಯಪಾಲರು ಆದೇಶ ಹೊರಡಿಸಿರುವ ಕುರಿತಾಗಿ ಮಾತನಾಡಿದ ಅವರು, ಇದರಿಂದ ನಮ್ಮ ಬಹುದಿನಗಳ ಕನಸು ಸಾಕಾರಗೊಂಡಿದೆ. ಈ ನೂತನ ಆದೇಶದಿಂದ ಹೈದರಾಬಾದ್ ಕರ್ನಾಟಕಕ್ಕೆ ನೀಡುವ ವಿಶೇಷ ಸ್ಥಾನವನ್ನು ಇನ್ನು ಮುಂದೆ ವಿಜಯನಗರ ಜಿಲ್ಲೆ ಕೂಡ ಪಡೆಯಲಿದೆ.

ಇತ್ತೀಚೆಗಷ್ಟೇ ನೂತನವಾಗಿ ವಿಜಯ ನಗರ ಜಿಲ್ಲೆಯಾಗಿದೆ. ಇದರಿಂದ ನಮ್ಮ ದಶಕಗಳ ಕನಸು ನನಸಾಗಿದೆ ಎಂಬ ಸಂತೋಷವಿದೆ. ಇದರೊಂದಿಗೆ ನೂತನ ಜಿಲ್ಲೆಗೆ ಹೈದರಾಬಾದ್ ಕರ್ನಾಟಕಕ್ಕೆ ನೀಡುವ ವಿಶೇಷ ಸ್ಥಾನ ಸಿಕ್ಕಿದೆ. ವಿಶೇಷವಾಗಿ ಈ ಜಿಲ್ಲೆಯನ್ನು ಅಭಿವೃದ್ಧಿ  ಮಾಡಬೇಕು ಎಂಬುದು ನಮ್ಮ ಗುರಿಯಾಗಿದೆ. ಪ್ರಸ್ತುತ ಈ ಕನಸು ನನಸಾಗುವುದಕ್ಕೆ ದಿನಕೂಡಿ ಬಂದಿದ್ದು, ಈ ಆದೇಶದಿಂದ ನನಗೆ ಅತೀವ ಸಂತೋಷ ನೀಡಿದೆ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ನೂತನ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ಬಲ: ಈ ನೂತನ ಆದೇಶದಿಂದ ಹೊಸ ಜಿಲ್ಲೆಯನ್ನು ಅಭಿವೃದ್ಧಿ ಮಾಡಲು ಹೊರಟಿರುವ ನಮಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ. ಐತಿಹಾಸಿಕತೆಯ ಸಂಕೇತವಾಗಿರುವ ವಿಜಯನಗರವನ್ನು ಅಭಿವೃದ್ಧಿ ಮಾಡಿ, ಮಾದರಿ ಜಿಲ್ಲೆಯನ್ನಾಗಿಸಿ, ಜನರಿಗೆ ಕೊಟ್ಟ ಮಾತನ್ನು ಈಡೇರಿಸಲು ನಮ್ಮ ಪ್ರಯತ್ನ ಎಂದೆಂದಿಗೂ ಪ್ರಾಮಾಣಿಕವಾಗಿರುತ್ತದೆ. ಹೀಗಾಗಿ ವಿಶೇಷ ಸ್ಥಾನದಿಂದ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ಪುಷ್ಠಿ ಬಂದಂತಾಗಿದೆ…

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply