ಬೆಂಗಳೂರು- ದೇಶದಲ್ಲಿ ಕರೋನಾ ಎರಡನೇ ಅಲೆ ಹೆಚ್ಚಾದ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ಮೋದಿ ಇಂದು ರಾಜ್ಯದ ಸಿ ಎಮ್ ಗಳ ಜೊತೆಯಲ್ಲಿ ಸಭೆ ನಡೆಸಿದ್ದಾರೆ. ಕರ್ಣಾಟಕ ತಮಿಳುನಾಡು ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಸಿ ಎಮ್ ಜೊತೆಯಲ್ಲಿ ಸಭೆ ನಡೆಸಿದ ಮೋದಿ, ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಇನ್ನೂ ಸೋಂಕು ಹೆಚ್ಚಾದ ರಾಜ್ಯದಲ್ಲಿ ಯಾವೆಲ್ಲಾ ಕ್ರಮ ಕೈಗೊಳ್ಳಲಾಯಿತು ಎಂಬುದರ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಸಭೆಯ ಬಳಿಕ ದೇಶವನ್ನು ಉದ್ದೇಏಇಸಿ ಮಾತನಾಡಿದ ಅವರು, ದೇಶದಲ್ಲಿ ಕರೋನಾ ಸೋಂಕು ಹೆಚ್ಚಾಗಿದೆ . ಹೀಗಾಗಿ ಎಲ್ಲರೂ ಕರೋನಾ ಲಸಿಕೆ ಪಡೆಯುವಂತೆ ಸೂಚನೆ ನೀಡಿದ್ದಾರೆ. ಏಪ್ರಿಲ್ 11 ರಿಂದ 14 ರ ವರೆಗೆ ಲಸಿಕಾ ಅಭಿಯಾನ ಮಾಡುವಂತೆ ಸೂಚನೆ ನೀಡಿದ್ದಾರೆ. ಕೇವಲ 45 ಮೇಲ್ಪಟ್ಟ ಜನರಿಗೆ ಮಾತ್ರ ಲಸಿಕೆ ನೀಡುವುದು ಬೇಡ ಎಲ್ಲರಿಗೂ ಲಸಿಕೆ ನೀಡುವಂತೆ ಸೂಚನೆ ನೀಡಿದ್ದಾರೆ. ಇನ್ನು ದೇಶದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲಾ ನೈಟ್ ಕರ್ಪ್ಯೂ ಜಾರಿ ಮಾಡುವುದು ಆಯಾ ರಾಜ್ಯಗಳಿಗೆ ಬಿಟ್ಟಿದ್ದು ಎಂದಿದ್ದಾರೆ. ‌ಆದ್ರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗಲಿದಿಯಾ ಎನ್ನುವ ಅನುಮಾನ ಕಾಡಿದೆ…

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply