ಬೆಂಗಳೂರು- ಕರೋನಾ ಮಾಹಾ ಮಾರಿ ಕಾಟ ಇನ್ನುನಿಂತಿಲ್ಲ ಒಂದು ಕಡೆಯಲ್ಲಿ ಕರೋನಾ ಕಾಟ ನೀಡುತಿದ್ದರೆ. ಮತ್ತೊಂದು ಕಡೆಯಲ್ಲಿ ರೂಪಾಂತರಿ ಕರೋನಾ ಹಾವಳಿ ಹೆಚ್ಚಾಗಿದೆ. ಇದರ ಜೊತೆಯಲ್ಲಿ ಮಹಾರಾಷ್ಟ್ರ ಹಾಗೂ ತಮಿಳುನಾಡಿನಲ್ಲಿ ಕರೋನಾ ಸೋಂಕಿತರ ಸಂಖ್ಯೆ ಏರಿಕೆ ಆಗಿದೆ. ಇನ್ನು ತಮಿಳುನಾಡು ಹಾಗೂ ಮಹಾರಾಷ್ಟ್ರದಿಂದ ನೇರ ಸಂಪರ್ಕ ಹೊಂದಿರುವ ರಾಜ್ಯದಲ್ಲಿ ಕಟ್ಟೆಚ್ಚರ ವಜಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ಹೆಚ್ಚಳ ಕಂಡಿರುವುದು ನಿಜ ಆದ್ರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲಾ ಎಂದು ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ
ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡುಬರುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿಗೊಳಿಸುವ ಯಾವುದೇ ಪ್ರಸ್ತಾವ ರಾಜ್ಯ ಸರ್ಕಾರದ ಮುಂದೆ ಇಲ್ಲ. ಕೇರಳದಿಂದ ಬರುತ್ತಿರುವವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಸೋಂಕು ದೃಢಪಡುತ್ತಿದೆ. ಆದರೆ, ಯಾರೂ ಆತಂಕಪಡುವ ಅಗತ್ಯವಿಲ್ಲ. ಕೇರಳದಿಂದ ಬರುವ ಜನರ ಮೇಲೆ ವಿಶೇಷ ನಿಗಾ ಇಡಲಾಗುತ್ತಿದೆ. ಲಾಕ್ಡೌನ್ ಅಥವಾ ಸೀಲ್ಡೌನ್ನಂತಹ ಕ್ರಮಗಳು ಮುಂದೆ ಇರುವುದಿಲ್ಲ ಎಂದಿದ್ದಾರೆ.