ಬೆಂಗಳೂರು- ಕರೋನಾ ಮಾಹಾ ಮಾರಿಗೆ ಕೊನೆಗೆ ಸಂಜೀವಿನಿ ಸಿಕ್ಕಿದ್ದು ನಾಳೆ ಮತ್ತೆ ಲಸಿಕಾ ಕಾರ್ಯಕ್ರಮ ಮುದುವರೆಯಲಿದೆ. ಇನ್ನು ನಿನ್ನೆಯಿಂದ ಆರಂಭವಾದ ಲಸಿಕಾ ಕಾರ್ಯಕ್ರಮದಲ್ಲಿ ಲಸಿಕೆಪಡೆದವರಿಗೆ ಯಾವುದೇ ತೊಂದರೆಯಾಗಿಲ್ಲಾ ಎಂದು ಆರೋಗ್ಯ ಸಚಿವ ಸುದಾಕರ್ ಹೇಳಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಮೊದಲ ದಿನವೇ ಶೇ. 62 ಮಂದಿಗೆ ಲಸಿಕೆ ನೀಡಿರುವುದು ಆಶಾದಾಯಕವಾಗಿದೆ. ಲಸಿಕೆ ಪಡೆದವರಲ್ಲಿ ಯಾರಿಗೂ ಅಡ್ಡ ಪರಿಣಾಮ ಉಂಟಾಗಿಲ್ಲ ಎಂದು ಸುಧಾಕರ ಹೇಳಿದ್ದಾರೆ. ಇನ್ನು ಕೇವಲ ಡಿ ಗ್ರೂಪ್ ನೌಕರರು ಮಾತ್ರ ಲಸಿಕೆ ಪಡೆದಿಲ್ಲಾ ಬದಲಾಗಿ ಡಾ.ಸುದರ್ಶನ್ ಬಲ್ಲಾಳ್ ಅವರು ಲಸಿಕೆ ಪಡೆದಿದ್ದು, ಅವರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಹೀಗಾಗಿ ಜನರು ಲಸಿಕೆಯ ಮೇಲೆ ವಿಶ್ವಾಸವಿಡಬೇಕು. ಲಸಿಕೆ ಪಡೆದರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಎರಡನೇ ಡೋಸ್ ಪಡೆದ 10 ದಿನಗಳ ಬಳಿಕ ರೋಗ ನಿರೋಧಕ ಶಕ್ತಿ ಬರುತ್ತದೆ. ಅಲ್ಲಿಯವರೆಗೂ ಸುರಕ್ಷತಾ ಕ್ರಮ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.