ಸ್ಮಶಾನ ಭೂಮಿಗಳಿಗಾಗಿ ಜಾಗ ಗುರುತಿಸಲು ಸೂಚನೆ.

0

ವಿಜಯಪುರ-

ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಅವರು ಇಂದು ಜಿಲ್ಲೆಯ ತಹಶೀಲ್ದಾರ್ ರೊಂದಿಗೆ ವಿಡಿಯೋ ಸಂವಾದ ನಡೆಸಿ ವಿವಿಧ ಗ್ರಾಮಗಳಲ್ಲಿ ಕಡ್ಡಾಯವಾಗಿ ಸ್ಮಶಾನ ಭೂಮಿಗಾಗಿ ಜಮೀನು ಗುರುತಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

 ಜಿಲ್ಲಾಧಿಕಾರಿಗಳ ಕಾರ್ಯಾಲಯದ ವಿಡಿಯೋ ಸಭಾಂಗಣದ ಮೂಲಕ ತಹಶೀಲ್ದಾರ್ ರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು ಜಿಲ್ಲೆಯಲ್ಲಿ ಸುಮಾರು 124 ಗ್ರಾಮಗಳಲ್ಲಿ ಸ್ಮಶಾನಕ್ಕಾಗಿ ಭೂಮಿಯ ಅಗತ್ಯವಿದ್ದು ತಕ್ಷಣ ಸರ್ಕಾರಿ ಭೂಮಿ ಗುರುತಿಸುವ ಲಭ್ಯವಿಲ್ಲದ ಕಡೆಯಲ್ಲಿ  ಆಯಾ ಸಮಾಜದ ಮುಖಂಡರೊಂದಿಗೆ ಈ ಸಮಸ್ಯೆಯನ್ನು ಆದ್ಯತೆಯ ಮೇಲೆ ಪರಿಗಣಿಸುವಂತೆ ಸೂಚನೆ ನೀಡಿದ್ದಾರೆ.

 ಜಿಲ್ಲೆಯ ಪ್ರತಿಯೊಂದು ಗ್ರಾಮಗಳಲ್ಲಿನ ಸರಕಾರಿ ಜಮೀನನ್ನು ಪಾರದರ್ಶಕ ರೀತಿಯಲ್ಲಿ ಗುರುತಿಸಬೇಕು, ಯುದ್ದೋಪಾದಿಯಲ್ಲಿ ಸ್ಮಶಾನ ಭೂಮಿಯನ್ನು ಗುರುತಿಸಿ ನಾಗರಿಕರಿಗೆ ಅವರ ಪ್ರಾಥಮಿಕ ಹಕ್ಕನ್ನು ದೊರಕಿಸಿ ಕೊಡಬೇಕು ಈ ವಿಷಯದಲ್ಲಿ ನಿರ್ಲಕ್ಷವನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

 ಅದರಂತೆ ಜಿಲ್ಲೆಯಲ್ಲಿನ ತೆರೆದ ಮತ್ತು ವಿಫಲ ಕೊಳವೆ ಬಾವಿಗಳನ್ನು ಮುಚ್ಚಲು ಕ್ರಮಕೈಗೊಳ್ಳಬೇಕು. ಮಾಜಿ ಸೈನಿಕರಿಗೆ ಜಮೀನು ಸೇರಿದಂತೆ ಇನ್ನಿತರ ಸರ್ಕಾರಿ ಡಜಮೀನುಗಳನ್ನು ಗುರುತಿಸಿಟ್ಟುಕೊಳ್ಳಬೇಕು. ಅವಶ್ಯಕತೆ ಇರುವಕಡೆ ಮಿನಿವಿಧಾನಸೌಧ  ಜಮೀನಿನ ಸಮಸ್ಯೆ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ, ಉಪವಿಭಾಗಾಧಿಕಾರಿಗಳಾದ ರಾಹುಲ್ ಶಿಂಧೆ, ಬಲರಾಮ ಲಮಾಣಿ, ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply