ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು

0

ಮಂಗಳೂರು

ಬಾಲ್ಯ ವಿವಾಹ ನಡೆಯುತ್ತಿರುವ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಬಾಲ್ಯ ವಿವಾಹ ರದ್ದುಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪ ನಡೆದಿದೆ.

ಸುಳ್ಯದ ದುಗಲಡ್ಕ ಕಂದಡ್ಕ ಮನೆಯೊಂದರಲ್ಲಿ  ನಿನ್ನೆ ರಾತ್ರಿ ವಿವಾಹ ಕಾರ್ಯಕ್ರಮ ನಡೆಯುತ್ತಿತ್ತು. ಇಲ್ಲಿ ನಡೆಯುತ್ತಿರುವ ವಿವಾಹದ ವಧುವಿಗೆ 18 ವರ್ಷ ತುಂಬಿರಲಿಲ್ಲ ಎಂಬ ಮಾಹಿತಿ ಅಧಿಕಾರಿಗಳ ಗಮನಕ್ಕೆ ಬಂದಿತ್ತು.‌ಕೂಡಲೇ ರಾತ್ರಿ ಸಿ.ಡಿ.ಪಿ.ಒ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಬಾಲ್ಯವಿವಾಹ ತಡೆದ ಘಟನೆ ವರದಿಯಾಗಿದೆ.

ಕಂದಡ್ಕದ ತಮಿಳು ಕುಟುಂಬವೊಂದರ ಪ್ರತಾಪ ಎಂಬ 26 ವರ್ಷದ ಯುವಕನಿಗೆ ಮೈಸೂರಿನ  ಹುಡುಗಿಯೊಂದಿಗೆ ಮದುವೆ ನಡೆಯುವುದಿತ್ತು. ಆದರೆ ಈ  ಹುಡುಗಿಗೆ 18 ವರ್ಷ  ತುಂಬಿರುವುದಿಲ್ಲ ಎಂಬ ಮಾಹಿತಿ ಎಂದು  ಸಿ.ಡಿ.ಪಿ.ಒಗೆ ಬಂದಿತ್ತು. ಮಾಹಿತಿ ಬಂದ ಕೂಡಲೇ  ಸುಳ್ಯದ ಸಿ.ಡಿ.ಪಿ.ಒ ರಶ್ಮಿ ಅಶೋಕ್ ರವರು ಇಲಾಖೆಯ ಮೇಲ್ವಿಚಾರಕಿ ಹಾಗೂ ಸಹಾಯಕ ಮಕ್ಕಳ ಸಂರಕ್ಷಣಾಧಿಕಾರಿ ದೀಪಿಕಾ, ಗ್ರಾಮಕರಣಿಕ  ತಿಪ್ಪೇಶ್, ನಾಲ್ಕು ಮಂದಿ ಪೋಲೀಸರ ಜತೆಗೆ ಕಂದಡ್ಕ ವಿವಾಹ ನಡೆಯುತ್ತಿರುವ ಸ್ಥಳಕ್ಕೆ ತೆರಳಿದ್ದರು.

ಮೈಸೂರಿನಿಂದ ಬಂದಿದ್ದ ವಧುವಿನ ಮನೆಯವರೊಡನೆ ವಿಚಾರಿಸಿದಾಗ ಹುಡುಗಿಗೆ 18 ವರ್ಷ ತುಂಬಿರುವ ಬಗ್ಗೆ ದಾಖಲೆ ಸಲ್ಲಿಸಲು ಅವರಿಗೆ ಸಾಧ್ಯವಾಗಲಿಲ್ಲವೆಂದು ಗೊತ್ತಾಗಿದ್ದು, ಅಧಿಕಾರಿಗಳು ಬಾಲ್ಯ ವಿವಾಹದ  ಸಮಸ್ಯೆಗಳ ಬಗ್ಗೆ  ವಿವರಿಸಿದ ಬಳಿಕ  18 ವರ್ಷ ತುಂಬಿದ ಬಳಿಕವೇ ಮದುವೆ ಮಾಡಿಸುವುದಾಗಿ ಹೇಳಿ ಯುವತಿಯ ಮನೆಯವರು ಮೈಸೂರಿಗೆ ಹಿಂತಿರುಗಲು ನಿರ್ಧರಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply