ಕರೋನಾ ಸೋಂಕಿಗೆ ಅಕ್ಕ ತಮ್ಮನ ಸಾವು

0

ವಿಜಯನಗರ – ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಕರೋನಾ ಸೋಂಕಿಗೆ ಒಂದೇ ದಿನದ ಅಂತರದಲ್ಲೇ ಅಕ್ಕ ತಮ್ಮ ಸಾವಿಗೀಡಾದ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್19 ಚಿಕಿತ್ಸೆ ಪಡೆಯುತ್ತಿದ್ದ ಅಕ್ಕ-ತಮ್ಮ ಒಂದೇ ದಿನದ ಅಂತರದಲ್ಲಿ ಸಾವಿಗೀಡಾಗಿದ್ದಾರೆ.

ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ  ಕ್ಯಾರೋಲಿನ್ ಲೂಸಿಯಾ ಸ್ಮಿತ್(45) ಹಾಗೂ ತಮ್ಮ ಸಾವಿಯೋ ಸ್ಮಿತ್(42) ಇಬ್ಬರು ಸಾವಿಗೀಡಾಗಿದ್ದಾರೆ. ಕಳೆದ 8 ದಿನಗಳಿಂದ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಇಬ್ಬರು  ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೇ ತಮ್ಮ ಸಾವಿಯೋ ಸ್ಮಿತ್ ನಿನ್ನೆ ನಿಧನರಾಗಿದ್ದು, ಅಕ್ಕ ಕ್ಯಾರೋಲಿನ್ ಲೂಸಿಯಾ ಸ್ಮಿತ್ ಇಂದು  ಮೃತಪಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಕ್ಯಾರೋಲಿನ್ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ಹೊಸಪೇಟೆಯ ಜನನಿ ಮಹಿಳಾ ಸಬಲೀಕರಣ ಸಂಘಟನೆಯಲ್ಲಿಯೂ ಸೇವೆ ಸಲ್ಲಿಸುತ್ತಿದ್ದರು.

ಹೊಸಪೇಟೆ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಕೋವಿಡ್ ಸಮೀಕ್ಷೆ ಕಾರ್ಯದಲ್ಲಿ ಸ್ವಯಂ ಸೇವಕಿಯಾಗಿ ಸೇವೆ ಸಲ್ಲಿಸಿದ್ದರು. ಈಗ ಕರೋನಾ ಸೋಂಕಿಗೆ ಅವರ ಕುಟುಂಬದ ಇಬ್ಬರು ಬಲಿಯಾಗಿದ್ದು, ಇಬ್ಬರನ್ನು ಕಳೆದುಕೊಂಡ ಕುಟುಂಬ ಈಗ ಆಸರೆ ಇಲ್ಲದಂತಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply