ತರಕಾರಿ ಅಂಗಡಿಗೆ ನುಗ್ಗಿದ ಓಮ್ನಿ

0

ಮಂಗಳೂರು

ಪಾರ್ಕಿಂಗ್‌ ನಲ್ಲಿ‌ ನಿಲ್ಲಿಸಿದ್ದ ಓಮ್ನಿ ವಾಹನವೊಂದು ತರಕಾರಿ ಅಂಗಡಿಗೆ ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಉಜಿರೆ ಎಸ್ ಡಿಎಂ ಕಾಲೇಜು ರಸ್ತೆ ಬಳಿ ಇರುವ ಶಾರ್ವರಿ ಕಾಂಪ್ಲೆಕ್ಸ್ ನಲ್ಲಿ ಕೆಳಮಹಡಿಯಲ್ಲಿರುವ ಜೈನ್ ತರಕಾರಿ ಅಂಗಡಿಯೊಳಗೆ ಏಕಾಏಕಿ ಓಮ್ನಿ ವಾಹನವೊಂದು ಮಧ್ಯಾಹ್ನ ನಿಯಂತ್ರಣ ತಪ್ಪಿ ನುಗ್ಗಿದೆ.

ಜೈನ್ ತರಕಾರಿ ಅಂಗಡಿಯಲ್ಲಿ ತರಕಾರಿ ಖರೀದಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಎಚ್ಚೆತ್ತುಕೊಂಡು ಕೂದಳೆಲೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓಮ್ನಿ ವಾಹನ ಮಾಲೀಕರು ತಮ್ಮ ಗಾಡಿಯಲ್ಲಿ ಮಗುವನ್ನು ಬಿಟ್ಟು ತರಕಾರಿ ಅಂಗಡಿಯ ಕಟ್ಟಡದ ಮುಂಭಾಗದ ಪಾರ್ಕಿಂಗ್ ನಲ್ಲಿ ನಿಲ್ಲಿಸಿ ಹೊರಗಡೆ ಹೋಗಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಅದೃಷ್ವವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯ ಎಲ್ಲಾ ದೃಶ್ಯಗಳು ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply