ನಿಂತಿದ್ದ ಟ್ಯಾಂಕರ್ ಗೆ ಓಮ್ನಿ ಕಾರು ಢಿಕ್ಕಿ.

0

ಮಂಗಳೂರು- ನಿಂತಿದ್ದ ಟ್ಯಾಂಕರ್ ಗೆ ಓಮ್ನಿ ಕಾರು ಢಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಫರಂಗಿಪೇಟೆ ಬಳಿ ನಡೆದಿದೆ. ಮೃತರನ್ನು ಫರಂಗಿಪೇಟೆಯ ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್ ಹಾಗೂ ಎಂಡಿ ಹುನೈಝ್ ಎಂದು ಗುರುತಿಸಲಾಗಿದೆ.

 ಎಂಡಿ ಮುಸ್ತಫಾ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು,  ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಮಂಗಳೂರಿನ ದಕ್ಕೆಯಲ್ಲಿ ಒಣ ಮೀನು ವ್ಯಾಪಾರಿಗಳಾಗಿದ್ದರು. ಮಂಗಳೂರಿನಿಂದ ಬಿಸಿರೋಡ್ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಡ್ಯಾರ್ ಮಾಂಡೋವಿ ಕಾರು ಶೋ ರೂಂ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ ಹೊಡದಿದೆ. ಅಪಘಾತದ ತೀವ್ರತೆಗೆ ಓಮ್ನಿ ಸಂಫೂರ್ಣ ನಜ್ಜುಗುಜ್ಜಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply