ಹಿಂದೂ ದೇವಾಲಯದ ಒಂದೇ ಒಂದು ರೂಪಾಯಿ  ಬೇರೆ ಧರ್ಮದವರಿಗೆ ಕೊಡಲ್ಲಾ.

0

ಮಂಗಳೂರು – ದೇವಾಲಯದ ಹಣವನ್ನು ಮದರಸಾಗಳಿಗೆ ನೀಡಲಾಗುತ್ತಿದೆ ಎನ್ನುವ ಆರೋಪಕ್ಕೆ‌ ಮುಜರಾಯಿ ಇಲಾಖೆಯ ಸಚಿವ ಕೋಟೆ ಶ್ರೀನಿವಾಸ್ ಪೂಜಾರಿ ಅವರು ಕೊನೆಗ ಸ್ಪಷ್ಟನೆ ನೀಡಿದ್ದಾರೆ. ಕಳೆದೊಂದ ವಾರದಿಂದ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಚರ್ಚೆ ಆರಂಭವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರ ತಮ್ಮ ಟ್ವೀಟರ್ ಅಕೌಂಟ್ ನಲ್ಲಿ ತಮ್ಮ ಹೇಳಿಕೆ ಬಿಡುಗಡೆ ಮಾಡಿದ್ದು, ಹಿಂದೂ ದೇವಾಲಯಗಳ ಹಣದಲ್ಲಿ ಒಂದೇ ಒಂದು ಪೈಸೆಯೂ ಅನ್ಯಧರ್ಮೀಯ ಸಂಸ್ಥೆಗಳಿಗೆ ನೀಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಹಿಂದೂ ದೇವಾಲಯಗಳ ಹುಂಡಿಯ ಭಕ್ತರ ಹಣ ಹಿಂದೂ ದೇವಾಲಯಗಳ ಅಭಿವೃದ್ಧಿಗೆ ಮಾತ್ರವೇ ಸೀಮಿತವಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಅನೇಕ ದೇವಾಲಯಗಳನ್ನು ಅಭಿವೃದ್ಧಿ ಪಡಿಸಲು ಇಲಾಖೆಯ ಹಣ ಉಪಯೋಗಿಸಲಾಗಿದ್ದು, ಯಾವುದೇ ಕಾರಣಕ್ಕೂ ದುರುಪಯೋಗವಾಗಲಾರದು ಎಂದು ತಮ್ಮ ಟ್ವೀಟರ್ ಅಕೌಂಟ್ ನಲ್ಲಿ ಬರೆದುಕೊಂಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply