ಬಳ್ಳಾರಿ-ಹಗರಿಬೊಮ್ಮನಹಳ್ಳಿ ತಾಲೂಕಿನ ಉಪನಾಯಕನಹಳ್ಳಿ ಗ್ರಾಮದ ಹತ್ತಿರ 19 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಸಮಾಜಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಸೋಮವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸಚಿವರು ವಸತಿ ಶಾಲೆಯ ಕ್ಯಾಂಪಸ್‍ನಲ್ಲಿ ಸುತ್ತಾಡಿ, ಅಲ್ಲಿ ನಿರ್ಮಿಸಲಾಗಿರುವ ಕಟ್ಟಡಗಳು ಹಾಗೂ ಕಲ್ಪಿಸಲಾಗಿರುವ ಸೌಲಭ್ಯಗಳನ್ನು ಪರಿಶೀಲಿಸಿದರು.

ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯೆಯ ಜೊತೆಗೆ ಸಂಸ್ಕಾರವೂ ಅಗತ್ಯ. ವಿದ್ಯೆ ಕಡಿಮೆಯಾದರೂ ಪರವಾಗಿಲ್ಲ;ಸಂಸ್ಕಾರ ರೂಢಿಸಿಕೊಳ್ಳುವುದನ್ನು ಮರೆಯದಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಶಿಕ್ಷಣದಿಂದ ಮಾತ್ರ ಸರ್ವಾಂಗೀಣ ಪ್ರಗತಿ ಸಾಧ್ಯ ಎಂದು ಹೇಳಿದ ಸಚಿವ ಶ್ರೀರಾಮುಲು ಅವರು 10 ಜಿಲ್ಲೆಗಳಲ್ಲಿ ಸ್ಪೋರ್ಟ್ ಶಾಲೆಗಳ ಸ್ಥಾಪನೆ, ವಸತಿ ಶಾಲೆಗಳಿಗೆ 500 ವಾರ್ಡನ್ ಗಳು ಹಾಗೂ ಶಿಕ್ಷಕರ ನೇಮಕಕ್ಕೆ ಕ್ರಮಕೈಗೊಳ್ಳಲಾಗುವುದು. ರಾಜ್ಯದಲ್ಲಿರುವ ಎಲ್ಲ ವಸತಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದರು.

ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಏಳೆಂಟು ಅಂಬೇಡ್ಕರ್ ಮತ್ತು ವಾಲ್ಮೀಕಿ ಭವನ ಮಂಜೂರು ಮಾಡುವಂತೆ ಸ್ಥಳೀಯ ಶಾಸಕ ಭೀಮಾನಾಯಕ್ ಅವರು ಕೋರಿಕೊಂಡಿದ್ದು; ಪಟ್ಟಿ ನೀಡಿದಲ್ಲಿ ತಕ್ಷಣ ಮಂಜೂರು ಮಾಡಿಕೊಡುವುದಾಗಿ ತಿಳಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply