ಬಿತ್ತನೆ ಬೀಜ ಮಾರಾಟ ಕೇಂದ್ರ ಆರಂಭ

0

ಬಳ್ಳಾರಿ ಕೊಟ್ಟೂರು ತಾಲೂಕಿನಲ್ಲಿ ವರುಣನ ಕೃಪೆಯಿಂದ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಯು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಕೋವಿಡ್-19ರ 2ನೇ ಅಲೆಯು ಹೆಚ್ಚಾಗಿರುವುದರಿಂದ ಗ್ರಾಮಾಂತರ ಪ್ರದೇಶಗಳ ರೈತಾಪಿ ಜನರು ಹೊಬಳಿ ಮಟ್ಟದಲ್ಲಿನ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿನೀಡಿ ಬಿತ್ತನೆ ಬೀಜಗಳನ್ನು ಪಡೆದುಕೊಳ್ಳುವಂತೆಸಹಾಯಕ ಕೃಷಿ ನಿರ್ದೇಶಕರಾದ ವಾಮದೇವ ಕೊಳ್ಳಿ ತಿಳಿಸಿದರು.

ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಕೊಳ್ಳಲು ಅಡಚಣೆಯಾಗಬಾರದೆಂಬ ಉದ್ದೆಶದಿಂದ , ತೂಲಹಳ್ಳಿ & ನಾಗರಕಟ್ಟೆ ಗ್ರಾ.ಪಂ ವ್ಯಾಪ್ತಿಯಲ್ಲಿನ ಗ್ರಾಮಗಳ ರೈತರಿಗೆ ಅನುಕೂಲವಾಗುವಂತೆ ತೂಲಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಳಿಗೆಯಲ್ಲಿ ಕೃಷಿ ಇಲಾಖೆಯು ತಾತ್ಕಾಲಿಕವಾಗಿ ಹೆಚ್ಚುವರಿ ಬೀಜ ಮಾರಾಟ ಕೇಂದ್ರವನ್ನು ಕಾರ್ಯಾರಂಭ ಮಾಡಿದೆ ಎಂದು ತಿಳಿಸಿದರು.

ಈ ಸೌಲಭ್ಯವನ್ನು ತೂಲಹಳ್ಳಿ ಹಾಗೂ ಸುತ್ತಮುತ್ತಲಿನ ಭಾಗದ ರೈತ ಸಮುದಾಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೃಷಿ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಲಾಗಿದೆ, ರೈತರಿಗೆ ಅಗತ್ಯವಾದ ಬೀಜಗಳನ್ನು ಸಮರ್ಪಕವಾಗಿ ಪೂರೈಸಲು ಇಲಾಖೆಯು ಅಗತ್ಯ ಕ್ರಮಗಳನ್ನ ಕೈ ಗೊಂಡಿದೆ ಎಂದು ತಿಳಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

IMG-20210603-WA0084.jpg

Email

Huligesh Tegginakeri

About Author

Huligesh Tegginakeri

ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಕಳೆದ ಎಂಟು ವರ್ಷಗಳ ಕಾಲ ಪತ್ರಿಕಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದೇನೆ.. ವಿಶೇಷ, ವಿಭಿನ್ನ ರೀತಿಯ ಸುದ್ದಿಗಳನ್ನು ಕಲೆಹಾಕಿ ಬರೆಯುವುದೇ ನನ್ನ ಹವ್ಯಾಸ..

Leave A Reply