ತೈಲ ಬೆಲೆ ಏರಿಕೆ ವಿರೋಧಿಸಿ: ಕಾಂಗ್ರೆಸ್ ನಿಂದ ಸ್ಥಳೀಯ ಮಟ್ಟದಲ್ಲಿ ಪ್ರತಿಭಟನೆ; ಡಾ।। ಅಜಯ್ ಸಿಂಗ್

0

ರಾಯಚೂರು ತೈಲ ಬೆಲೆ ಏರಿಕೆ ವಿರೋಧಿಸಿ ಸ್ಥಳೀಯ ಮಟ್ಟದಿಂದ ಕಾಂಗ್ರೆಸ್ ಪ್ರತಿಭಟನೆ ಮಾಡಲಿದೆ, ತೈಲ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿದೆ, ಜನಜೀವನ ಅಸ್ತವ್ಯಸ್ತಗೊಳಿಸಲು ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ ಎಂದು ಶಾಸಕ ಡಾ।। ಅಜಯ್ ಸಿಂಗ್ ಆರೋಪಿಸಿದರು.

ರಾಯಚೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತಾಡ್ತಾ, ತೈಲ ಬೆಲೆ ಏರಿಕೆ ವಿರೋಧಿಸಿ, ಜಿಲ್ಲಾ, ತಾಲ್ಲೂಕು, ಗ್ರಾಮ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಲಿದ್ದಾರೆ. ಇನ್ನು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನ ಪೆಟ್ರೋಲ್ ದರ ೬೦ ರಿಂದ ೬೫ ರೂ. ಮಾರಾಟವಾಗಿತ್ತು. ಆಗ 1₹ದರ ಏರಿದರೂ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದರು, ಪೆಟ್ರೋಲ್ ದರ ಇಳಿಸುವುದಾಗಿ ಭರವಸೆ ನೀಡಿದ್ದ ಪ್ರಧಾನಿ ಮೋದಿಯವರು ಈಗ ತಮ್ಮ ಅಧಿಕಾರಾವಧಿಯಲ್ಲಿ ೧೦೦ ಗಡಿ ದಾಟಿದೆ, ಇನ್ನು ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲೆ ೩೪ ರೂ. ತೆರಿಗೆ ವಿಧಿಸಿದರ ಪರಿಣಾಮ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಅತಿ ಕಡಿಮೆಯಿದ್ದರೂ, ದುಬಾರಿ ಬೆಲೆಯಲ್ಲಿ ಮಾರಾಟ ಮಾಡಿ, ಜನರನ್ನು ಕೊಳ್ಳೆ ಹೊಡೆಯಲಾಗುತ್ತಿದೆ.

ಅಡುಗೆ ಅನಿಲ ಮನಮೋಹನಸಿಂಗ್ ಅವಧಿಯಲ್ಲಿ ೪೮೦ ರೂ. ಮಾರಾಟವಾಗುತ್ತಿತ್ತು. ಆದರೆ, ೮೬೦ ರೂ.ಗೆ ಮಾರಾಟವಾಗುತ್ತಿದೆ. ಅಲ್ಲದೇ, ಸಬ್ಸಿಡಿಯೂ ಸಹ ನೀಡುತ್ತಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭಾರತದ ಮೇಲೆ ೫೩ ಲಕ್ಷ ಕೋಟಿ ಸಾಲ ಇತ್ತು. ಆದರೆ, ಕೇವಲ ೭ ವರ್ಷದ ಅವಧಿಯಲ್ಲಿ ೧೩೫ ಲಕ್ಷ ಕೋಟಿ ಸಾಲ ಮಾಡಲಾಗಿದೆ. ಮೋದಿ ಅವರು ೮೫ ಲಕ್ಷ ಕೋಟಿ ಸಾಲ ಮಾಡುವ ಮೂಲಕ ಈ ದೇಶದ ಮೇಲೆ ಸಾಲದ ಹೊರೆ ಹೆಚ್ಚಿಸಿದ್ದಾರೆ. ಈ ಸಾಲದ ಹಣ ಎಲ್ಲಿಗೆ ಹೋಗಿದೆ ಎಂದರೇ ಉತ್ತರವಿಲ್ಲಾ, ಅದ್ರೆ ಆದಾನಿ ಅವರ ಆಸ್ತಿ ೪೩ ಬಿಲಿಯನ್ ಡಾಲರ್‌ಗಳಷ್ಟಾಗಿದೆ. ಕೇವಲ ಅಂಬಾನಿ, ಆದಾನಿಗಳಿಗಾಗಿ ಬಿಜೆಪಿ ಸರ್ಕಾರ ದೇಶದ ಆರ್ಥಿಕತೆಯನ್ನು ಮೀಸಲಿಟ್ಟಿದೆ. ಜನ ಸಾಮಾನ್ಯರು ಮತ್ತು ರೈತರು ಆರ್ಥಿಕ ಸಂಕಷ್ಟದಲ್ಲಿ ತೀವ್ರ ತೊಂದರೆಗೆ ಗುರಿಯಾಗಿಸಿದ್ದಾರೆ ಎಂದು ಆರೋಪಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply