ಸೈಕಲ್ ಪಥಕ್ಕೆ ವಿರೋಧ

0

ಮಂಗಳೂರು-  

ಬೆಂಗಳೂರು ಮಾದರಿಯಲ್ಲಿ ಸೈಕಲ್ ಪಥ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಮಂಗಳೂರಲ್ಲಿ ಪ್ರಸ್ತಾವಿತ ಸೈಕಲ್ ಪಥವು ಅವೈಜ್ಞಾನಿಕವಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ಎ.ಸಿ. ವಿನಯರಾಜ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನಲ್ಲಿ ಎರಡು ಹಂತದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಸೈಕಲ್ ಪಥವು ಅವೈಜ್ಞಾನಿಕವಾಗಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು.

ಪ್ರಸ್ತಾವಿತ ಮಾರ್ಗಗಳಲ್ಲಿ 3 ಮೀ. ಅಗಲದ ಸುಮಾರು12 ಕಿ.ಮೀ. ಉದ್ದರ ಸೈಕಲ್ ಪಥ ನಿರ್ಮಿಸಲು ಸ್ಥಳಾವಕಾಶವೇ ಇಲ್ಲ. ಆದಾಗ್ಯೂ ಸೈಕಲ್ ಪಥ ಮಾಡಲು ಮನಪಾ ಹೊರಟಿದೆ. ಇದಕ್ಕೆ ಶಾಸಕ ವೇದವ್ಯಾಸ ಕಾಮತ್‌ರ ಹಠಮಾರಿ ಧೋರಣೆಯೇ ಕಾರಣ ಎಂದು ಆಪಾದಿಸಿದ್ದಾರೆ.ಸೈಕಲ್ ಪಥವು ವೈಜ್ಞಾನಿಕ ನೆಲೆಯಲ್ಲಿ ನಿರ್ಮಿಸಬೇಕಿತ್ತು. ಆದರೆ, ಶಾಸಕರು ಅದಕ್ಕೆ ಅವಕಾಶವನ್ನೇ ಕೊಡಲಿಲ್ಲ. ತರಾತುರಿ ಯಲ್ಲಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಇದು ಖಂಡನೀಯ. ಇದರ ವಿರುದ್ಧ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಆದಾಗ್ಯೂ ಸಕಾರಾತ್ಮಕ ಪ್ರತಿಕ್ರಿಯೆ ಬಾರದಿದ್ದರೆ ಕಾನೂನು ಹೋರಾಟ ಮಾಡಲಾಗುವುದು ಎಂದು ವಿನಯರಾಜ್ ತಿಳಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply