ಉಡುಪಿ – ಪೊಗರು ಚಿತ್ರದಲ್ಲಿ ಬ್ರಾಹ್ಮಣರ ಸಮಾಜದ ಬಗ್ಗೆ ಅವಹೇಳನವಾಗಿ ಚಿತ್ರದಲ್ಲಿ ಪ್ರದರ್ಶನ ಮಾಡುವ ಮೂಲಕ ಚಿತ್ರತಂಡ ಈಗ ಪೇಚಿಗೆ‌ಸಿಲುಕಿದೆ. ಈ ಬಗ್ಗೆ ಉಡುಪಿಯ ಪೇಚಾವರ ಶ್ರೀಗಳು ಪ್ರತಿಕ್ರಿಯೆ ನೀಡಿದ ಅವರು

ಪೊಗರು ಚಿತ್ರದಲ್ಲಿ ಬ್ರಾಹ್ಮಣರಿಗೆ ಅವಹೇಳನ ಮಾಡಿರುವುದು ನನ್ನ ಗಮನಕ್ಕೂ ಬಂದಿದೆ. ಕೂಡಲೇ ಚಿತ್ರದಲ್ಲಿ ಇರುವ ಅವಹೇಳನ ದೃಶ್ಯಗಳನ್ನು ತೆಗೆಯುವಂತೆ  ಪೊಗರು ಚಿತ್ರ ತಂಡಕ್ಕೆ ಪೇಜಾವರಶ್ರೀ ಎಚ್ಚರಿಕೆ ನೀಡಿದ್ದಾರೆ. ಚಿತ್ರದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡುವ ದೃಶ್ಯಗಳಿರುವುದು ಗಮನಕ್ಕೆ ಬಂದಿದೆ ಆಕ್ಷೇಪ ಇರುವ ದೃಶ್ಯಗಳಿಗೆ ಕತ್ತರಿ ಹಾಕುವ ಮಾಹಿತಿಯೂ ಸಿಕ್ಕಿದೆ

ಸಮಾಜದಲ್ಲಿ ನೆಮ್ಮದಿಯಿಂದ ಬಾಳಬೇಕಾದರೆ ಇಂತಹ ಕೃತ್ಯಗಳಿಗೆ ಕೈಹಾಕಬಾರದು, ಒಂದು ಸಮಾಜವನ್ನು ಕೆಣಕಿ ಹಳಿದು ಯಾರೂ ನೆಮ್ಮದಿಯಾಗಿ ಬದುಕಲು ಸಾಧ್ಯವಿಲ್ಲ ಅವಹೇಳನ ಮಾಡುವ ಕೃತ್ಯ ಇಲ್ಲಿಗೆ ಕೊನೆಯಾಗಲಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಕೆಲಸ ಯಾರೂ ಮಾಡಬೇಡಿ, ಎನ್ನುವ ಮೂಲಕ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಚಿತ್ರತಂಡದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply