ಮೂರನೇ ಅಲೆಯ ಭಯದಲ್ಲಿರುವ ಜನ

0

ವಿಜಯಪುರ – ಕೊರೊನಾ ಎರಡನೇ ಅಲೆಯಿಂದ ಜನ ಈಗಾಗಲೇ ಸಂಕಷ್ಟದಲ್ಲಿದ್ದು, ಮೂರನೇ ಅಲೆಯ ಬಗ್ಗೆಯೂ ಆತಂಕದಲ್ಲಿದ್ದಾರೆ.  ಅದರಲ್ಲೂ ಕೊರೊನಾ 3ನೇ ಅಲೆ ಮಕ್ಕಳನ್ನು ಕಾಡಲಿದೆ ಎಂಬ ಮಾತುಗಳು ಕೇಳಿ ಬರುತಗತಿರುವುದು ಪೋಷಕರು ಅದರಲ್ಲೂ ತಾಯಂದಿರು ಮತ್ತು ಮಹಿಳೆಯರನ್ನು ಹೆಚ್ಚು ಚಿಂತಾಕ್ರಾಂತರನ್ನಾಗಿ ಮಾಡಿದೆ.

ಕೊರೊನಾ ಎರಡನೇ ಅಲೆಯ ಪ್ರಭಾವ ಕಡಿಮೆಯಾಗುತ್ತಿದ್ದರೂ ಸಂಭವನೀಯ ಮೂರನೇ ಅಲೆಯ ಭೀತಿ ಜನರನ್ನು ಕಾಡುತ್ತಿರುವುದರಿಂದ 3ನೇ ಅಲೆ ಪ್ರಭಾವ ಬೀರಬಾರದು ಎಂಬ ಸದುದ್ದೇಶದಿಂದ ಗ್ರಾಮಸ್ಥರು ಪಿಕೇಲಮ್ಮ ದೇವಿಯ ಮೊರೆ ಹೋಗಿದ್ದಾರೆ.   ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಮಹಿಳೆಯರು ವೀರೇಶ್ವರ ಸರ್ಕಲ್ ಬಳಿ ಇರುವ ಪಿಕೇಲಮ್ಮ ದೇವಸ್ಥಾನಕ್ಕೆ ಕಳೆದ ಸೋಮವಾರದಿಂದ ಪೂಜೆ ಸಲ್ಲಿಸುತ್ತಿದ್ದಾರೆ.  ಪ್ರತಿದಿನ ದೇವಿಗೆ ನೈವೇದ್ಯ ಅರ್ಪಿಸುತ್ತಿದ್ದಾರೆ.  ಅಷ್ಟೇ ಅಲ್ಲ, ಹಾಡು ಹೇಳುತ್ತ ಭಜನೆ ಕೂಡ ಮಾಡುತ್ತಿದ್ದಾರೆ. 

ಪ್ರತಿದಿನ ಸಂಜೆ ದೇವಸ್ಥಾನಕ್ಕೆ ಆಗಮಿಸುವ ಮಹಿಳೆಯರು ಕೊರೊನಾ ಮೂರನೇ ಅಲೆಯಿಂದ ತಮ್ಮನ್ನು ಹಾಗೂ ತಮ್ಮ ಮಕ್ಕಳನ್ನು ರಕ್ಷಿಸುವಂತೆ ಭಜನೆ ಮಾಡುತ್ತಿದ್ದಾರೆ.  ಪ್ರತಿದಿನ ಸಂಜೆಯಿಂದ ರಾತ್ರಿಯವರೆಗೆ ಸುಮಾರು ನಾಲ್ಕು ಗಂಟೆಗಳ ಕಾಲ ಇಲ್ಲಿ ಪಿಕೇಲಮ್ಮ ದೇವಸ್ಥಾನದಲ್ಲಿ ಭಜನೆ ನಡೆಯುತ್ತಿದ್ದು, ಐದು ದಿನಗಳ ಕಾಲ ಈ ಕಾರ್ಯಕ್ರಮ ಆಯೋಜಿಸಿದ್ದಾರೆ.

ಕರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.  ಹೀಗಾಗಿ ಈ ಮೂರನೇ ಅಲೆ ತಮ್ಮ ಮಕ್ಕಳ ಮೇಲೆ ಯಾವುದೇ ರೀತಿ ಪರಿಣಾಮ ಬೀರಬಾರದು.  ತಮ್ಮ ಮಕ್ಕಳನ್ನು ಕಾಪಾಡು.  ತಮ್ಮ ಕುಟುಂಬವನ್ನು ಕೊರೊನಾ ಮೂರನೇ ಅಲೆಯಿಂದ ರಕ್ಷಿಸು ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ವಿನಾಯಕ ನಗರದ ಮಹಿಳೆಯರು ತಾಯಿ ಪಿಕೇಲಮ್ಮ ದೇವಿಯ ಮೊರೆ ಹೋಗಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply