ಪೆಟ್ರೋಲ್ ಬೆಲೆ ಏರಿಕೆ, ಐದು ದಿನಗಳ ಕಾಲ ಕಾಂಗ್ರೆಸ್ ನಿಂದ ಆಂದೋಲನ

0

ಬೆಂಗಳೂರು – ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆ ಇಂದ ಸಾಮಾನ್ಯ ಜನರು ಕಂಗಾಲಾಗಿದ್ದಾರೆ. ಒಂದು ಕಡೆ ಬೆಲೆ ಏರಿಕೆ ಮತ್ತೊಂದು ಕಡೆ ಕರೋನಾ ಹೊಡೆತ ಹೀಗಾಗಿ ಜನರ ಬದುಕು ಹಳ್ಳ ಹಿಡಿದಿದೆ. ಇದೇ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ಐದು ದಿನಗಳ ಕಾಲ ಪ್ರತಿಭಟನೆ ಮಾಟಲು ನಿರ್ಧಾರ ಮಾಡಿದ್ದು, ಬಿಜೆಪಿ ದುರಾಡಳಿತದಲ್ಲಿ ಪೆಟ್ರೋಲ್ ಬೆಲೆ ₹100ರ ಗಡಿ ದಾಟಿರುವುದನ್ನು ವಿರೋಧಿಸಿ ಕಾಂಗ್ರೆಸ್‌ನಿಂದ ರಾಜ್ಯಾದ್ಯಂತ ಬೃಹತ್ ಆಂದೋಲನಕ್ಕೆ ಕರೆ ನೀಡಲಾಗಿದೆ‌.

ಜೂನ್ 11ರಿಂದ 15ರ ವರೆಗೆ 5 ದಿನ ಎಲ್ಲಾ ಜಿಲ್ಲಾ, ತಾಲೂಕು, ಪಂಚಾಯಿತಿ ಹಾಗೂ ಹೋಬಳಿ ಕೇಂದ್ರಗಳಲ್ಲಿ 5000 ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆ ನಡೆಯಲಿದೆ. ಈಗಾಗಲೇ ರಾಜ್ಯದ ಕೆಲ ಜಿಲ್ಲೆಯಲ್ಲಿ ಇಂದು ಸಹ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.‌‌ ನಾಳೆಯಿಂದ ಐದು ದಿನಗಳ ಕಾಲ ಕಾಂಗ್ರೆಸ್ ಪ್ರತಿಭಟನೆ ಮಾಡಲು ಕಾರ್ಯಕರ್ತರಿಗೆ ಕರೆ ನೀಡಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply