ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ವಶಪಡಿಸಿಕೊಂಡ ಪೊಲೀಸರು

0

ಮಂಗಳೂರು  – ಮಂಗಳೂರಿನ ಉಳ್ಳಾಲ ನಗರಸಭಾ ವ್ಯಾಪ್ತಿಯ ಕೋಟೆಪುರದಲ್ಲಿ ಅಕ್ರಮವಾಗಿ ಮರಳು ತುಂಬಿಸಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ನಾಲ್ಕು ಲಾರಿಗಳನ್ನು ವಶಪಡಿಸಿಕೊಂಡ ಉಳ್ಳಾಲ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಕೋಟೆಪುರ ನಿವಾಸಿ ಶೌಕತ್ (35) ಬಂಧಿತ ಆರೋಪಿ. ಈ ವೇಳೆ ಉಳಿದ ಆರೋಪಿಗಳು ಪರಾರಿಯಾಗಿದ್ದಾರೆ. ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಮರಳು ಸಹಿತ ನಾಲ್ಕು ಲಾರಿ, ಎರಡು ದ್ವಿಚಕ್ರ ವಾಹನ ವಶಪಡಿಸಿಕೊಂಡಿರುವ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ಪೊಲೀಸರ ತಂಡ 15 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply