ಬೆಂಗಳೂರು – ಪವರ್ ಬ್ಯಾಂಕ್ ವಿರುದ್ದ ರಾಜಧಾನಿ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ. ಅಷ್ಟಕ್ಕೂ ಇದು ಮೊಬೈಲ್ ಬ್ಯಾಟಿಂಗ್ ಚಾರ್ಚ್ ಮಾಡುವ ಪವರ್ ಬ್ಯಾಂಕ್ ಅಲ್ಲಾ ಬದಲಿಗೆ ದಿನದ ಲಾಭದ ಆಧಾರದಲ್ಲಿ ಜನರಿಗೆ  ಆಮಿಷವೊಡ್ಡಿ ಸಾವಿರಾರು ಜನರಿಂದ ಕೋಟ್ಯಾಂತರ ರೂಪಾಯಿ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಲಾದ ಪವರ್ ಬ್ಯಾಂಕ್ ಮೊಬೈಲ್ ಅಪ್ಲಿಕೇಶನ್.

ಒಂದು ಕಡೆ ಜನರು ಕರೋನಾ ಹೊಡೆತಕ್ಕೆ ಸಿಲುಕಿ ದಿಡಿಮೆ ಇಲ್ಲದೇ ಹೈರಾಣಾಗಿರುವ ಸಮಯದಲ್ಲಿ ಜನರ ಭಾವನೆಯನ್ನೇ ಬಂಡವಾಳ ಮಾಡಿಕೊಂಡು ಪವರ್ ಬ್ಯಾಂಕ್ ಎನ್ನುವ ಮೊಬೈಲ್ ಆಫ್ ಒಂದು ಸದ್ದಿಲ್ಲದೇ ಜನರಿಂದ ಹಣ ಹೂಡಿಕೆ ಮಾಡಿಕೊಂಡು ಕೋಟ್ಯಾಂತರ ಹಣ ಲೂಟಿ ಮಾಡಿದೆ. ಈ ಸಂಭಂದ ಬೆಂಗಳೂರಿನ ಉತ್ತರ ವಿಭಾಗ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬೆನ್ಸನ್‌ ಟೌನ್ ನಿವಾಸಿಯಾದ 47 ವರ್ಷದ ಮಹಿಳೆಯೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ.

 ‘ಪವರ್ ಬ್ಯಾಂಕ್’ ಆ್ಯಪ್ ನಿರ್ವಹಣೆ ಮಾಡುತ್ತಿದ್ದ ಯುವಿಪಿಎಲ್‌ಎ ಟೆಕ್ನಾಲಜಿ ಕಂಪನಿ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ರಾಜ್ಯದಾದ್ಯಂತ ಸಾವಿರಾರು ಮಂದಿ ಹಣ ಹೂಡಿಕೆ ಮಾಡಿರುವ ಮಾಹಿತಿ ಇದೆ. ಮಹಿಳೆ ಮಾತ್ರ ಸದ್ಯ ದೂರು ನೀಡಿದ್ದು, ಉಳಿದಂತೆ ಬೇರೆ ಯಾವೆಲ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply