ಚಿರತೆಯನ್ನು ದತ್ತು ಪಡೆದ ಪ್ರಜ್ವಲ್ ರೇವಣ್ಣ

0

ಮೈಸೂರು

ಇತ್ತೀಚಿನ್ ದಿನಗಳಲ್ಲಿ ಸಿನಿಮಾ ನಟ- ನಟಿಯರು ಪ್ರಾಣಿಗಳನ್ನು ದತ್ತು ಪಡೆಯುವುದು ಸಾಮಾನ್ಯವಾಗಿದೆ. ಅದರಲ್ಲೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆದು ಎಲ್ಲರಿಗೂ ಮಾದರಿಯಾಗಿದ್ದಾರೆ.  ಈಗ ಅವರಂತೆ  ಯುವ ರಾಜಕಾರಣಿ ಕರಿ ಚಿರತೆಯನ್ನು ದತ್ತು ಪಡೆದಿದ್ದಾರೆ.

ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಅವರು ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಅಪರೂಪದ ಕಪ್ಪು ಚಿರತೆಯನ್ನು ದತ್ತು ಪಡೆದಿದ್ದಾರೆ. ಮೃಗಾಲಯದಲ್ಲಿ ವನ್ಯಜೀವಿಗಳನ್ನು ದತ್ತು ಪಡೆಯುವ ಮೂಲಕ ವನ್ಯಜೀವಿಗಳ ಪಾಲನೆಯಲ್ಲಿ ಕೈ ಜೋಡಿಸಿದ್ದಾರೆ. ಈ ಕುರಿತಂತೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಎಲ್ಲರಿಗೂ ಮನವಿ ಮಾಡಿದ್ದು , ಸಾಧ್ಯವಾದವರೆಲ್ಲ ಒಂದೊಂದು ಪ್ರಾಣಿಯನ್ನು ದತ್ತು ಪಡೆಯುವ ಮೂಲಕ ಸಂಕಷ್ಟದಲ್ಲಿರುವ ರಾಜ್ಯದ ಮೃಗಾಲಯಗಳಿಗೆ ಎಲ್ಲರೂ ನೆರವಾಗೋಣ  ಎಂದು ಮನವಿ ಮಾಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply