ಕಾಲೇಜು ಆರಂಭಕ್ಕೆ ಸಿದ್ಧತೆ, ವಿದ್ಯಾರ್ಥಿಗಳಿಗೆ ಲಸಿಕೀಕರಣ ಮುಗಿದ ನಂತರ ನಿರ್ಧಾರ : ಡಿಸಿಎಂ

0

ಹುಬ್ಬಳ್ಳಿ –  ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳ ಆರಂಭಕ್ಕೆ ಸರಕಾರ ಇನ್ನೂ ಯಾವುದೇ ಚರ್ಚೆ ನಡೆಸಿಲ್ಲ. ಆದರೆ, ಭೌತಿಕ ತರಗತಿಗಳ ಆರಂಭಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಲಸಿಕೆ ಕೊಡುವ ಕೆಲಸ ಭರದಿಂದ ಸಾಗುತ್ತಿದೆ. ಲಸಿಕೆ ಕಾರ್ಯ ಮುಗಿಯುತ್ತಿದ್ದಂತೆ ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಕಾಲೇಜುಗಳನ್ನು ತೆರೆಯಲು ಸವಾಲುಗಳಿರುವುದು ನಿಜ. ಆದರೆ ಎಷ್ಟು ದಿನವೆಂದು ಹಾಗೇ ಇರಲು ಸಾಧ್ಯ? ಜೀವನ ಸಾಗುತ್ತಲೇ ಇರಬೇಕು. ಸುರಕ್ಷತೆಯ ಜತೆ ಜತೆಗೇ ಜೀವನ ಸಾಗುತ್ತಿರಬೇಕು. ಈ ನಿಟ್ಟಿನಲ್ಲಿ ಲಸಿಕೆ ಮಾತ್ರವೇ ಪರಿಹಾರ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply