ಪ್ರವಾಹ ಜನ-ಜಾನುವಾರುಗಳ ರಕ್ಷಣೆಗೆ ಆದ್ಯತೆ:ಸಿಎಂ ಬಿಎಸ್‍ವೈ ಸೂಚನೆ

0

ಬೆಂಗಳೂರು-ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು, ಕಳೆದ ವರ್ಷದಂತೆ ಈ ವರ್ಷವೂ ಪ್ರವಾಹ ಸ್ಥಿತಿ ಎದುರಾಗುವ ಸಾಧ್ಯತೆ ಇದ್ದು,ಪ್ರವಾಹ ಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಮತ್ತು ಅದರಿಂದ ಉಂಟಾಗುವ ಹಾನಿಯ ಪ್ರಮಾಣವನ್ನು ಕಡಿಮೆ ಮಾಡುವುದಕ್ಕೆ ಜಿಲ್ಲಾಧಿಕಾರಿಗಳು ಮುಂದಾಗಬೇಕು. ಜನ-ಜಾನುವಾರುಗಳ ರಕ್ಷಣೆಗೆ ಮೊದಲ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದರು.

ಮುಂಗಾರು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾದ ಪೂರ್ವಸಿದ್ಧತಾ ಕ್ರಮಗಳ ಕುರಿತಂತೆ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು,ಜಿಲ್ಲಾಧಿಕಾರಿಗಳು,ಜಿಪಂ ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ 1710 ಹಳ್ಳಿಗಳನ್ನು ಪ್ರವಾಹಕ್ಕೆ ಬಾಧಿತವಾಗುವ ಪ್ರದೇಶಗಳೆಂದು ಗುರುತಿಸಲಾಗಿದ್ದು, ಅಲ್ಲಿ ಎಲ್ಲ ರೀತಿಯ ಪೂರ್ವಸಿದ್ಧತೆಗಳನ್ನು ಜಿಲ್ಲಾಧಿಕಾರಿಗಳು ತತ್‍ಕ್ಷಣ ಕೈಗೊಳ್ಳಬೇಕು. ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ಎದುರಿಸುವ ನಿಟ್ಟಿನಲ್ಲಿ ಗ್ರಾಪಂ ಮಟ್ಟದಲ್ಲಿ ರಚಿಸಲಾದ ವಿಪತ್ತು ನಿರ್ವಹಣಾ ತಂಡಗಳು ತಕ್ಷಣ ಕಾರ್ಯಪ್ರವೃತ್ತರಾಗುವ ನಿಟ್ಟಿನಲ್ಲಿ ಸನ್ನದ್ಧವಿರುವಂತೆ ನೋಡಿಕೊಳ್ಳಲು ಅವರು ಸೂಚನೆ ನೀಡಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply