ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ತಳಹಂತದ ಅಧಿಕಾರಿಗಳ ಪಾತ್ರ ಮುಖ್ಯ: ಸಿಇಒ

0

ಕೊಪ್ಪಳ 

ಕೊಪ್ಪಳ  ಸರ್ಕಾರದ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ತಳಹಂತದ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ನೂತನ ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೌಜಿಯಾ ತರನುಮ್ ಹೇಳಿದರು.

ಪ್ರಥಮ ಬಾರಿಗೆ ಯಲಬುರ್ಗಾ ತಾಲ್ಲೂಕಿನ ಬೇವೂರ ಮತ್ತು ವಣಗೇರಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಸರ್ಕಾರದ ಪ್ರಮುಖ ಯೋಜನೆಗಳಾದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ಜಲ ಜೀವನ್ ಮಿಷನ್ ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ನಂತರ ಮಾತನಾಡಿದರು.

ತಳಹಂತದ ಅಧಿಕಾರಿಗಳಿಗೆ ಗ್ರಾಮದ ನೈಜ ಪರಿಸ್ಥಿತಿ ಸಂಪೂರ್ಣ ಅರಿವಿರುತ್ತದೆ. ಪ್ರತಿದಿನ ಗ್ರಾಮೀಣರೊಂದಿಗೆ ವ್ಯವಹರಿಸುವುದರಿಂದ ಗ್ರಾಮೀಣರ ಅವಶ್ಯಕತೆಗಳು, ಸಮಸ್ಯೆಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಲ್ಲರು. ಅವರಿಂದ ಮಾಹಿತಿಯನ್ನು ಪಡೆದು ಇಲಾಖೆಯ ಮೇಲಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಗ್ರಾಮದ ಅಭಿವೃದ್ಧಿಗೆ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುತ್ತಾರೆ. ಆದ್ದರಿಂದ ಯಾವುದೇ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ತಳಹಂತದ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಗ್ರಾಮದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅವರು ಹೇಳಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply