ಇನ್ನು ಜೀವಂತವಾಗಿದೆಯಾ ಜೀತ ಪದ್ದತಿ…!

0

ಮಂಗಳೂರು  – ಮಕ್ಕಳನ್ನು, ಮಹಿಳೆಯರನ್ನು‌ ಜೀತದಾಳುವಾಗಿ ದುಡಿಸಿಕೊಳ್ತಿದ್ದ ಸ್ಥಳಕ್ಕೆ‌  ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಆದೇಶದಂತೆ ವಿವಿಧ ಇಲಾಖಾಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ.

ಸುಳ್ಯ ತಾಲೂಕಿನ ಪಂಜ ಗ್ರಾಮದ ಕರಿಕಳದ ವಿಶ್ವನಾಥ್ ಭಟ್ ಎಂಬುವವರ ಮನೆಯಲ್ಲಿ ಸುಮಾರು ಎಂಟರಿಂದ ಹತ್ತು ಮಕ್ಕಳು ಹಾಗೂ ಮಹಿಳೆಯರನ್ನು ದುಡಿಸುತ್ತಿದ್ದು,ಯಾವುದೇ ರೀತಿಯಲ್ಲಿ ಸಂಬಳವನ್ನು ನೀಡಲಾಗುತ್ತಿಲ್ಲ ಎಂದು ಆರೋಪಿಸಲಾಗಿತ್ತು.

ಇದಕ್ಕೆ ಪೂರಕವೆಂಬಂತೆ  ಮಕ್ಕಳು ದನ ಮೇಯಿಸುತ್ತಿರುವ ವೀಡಿಯೋ ಒಂದು ವೈರಲ್ ಆಗಿತ್ತು. ಈ ಕುರಿತು ಸಾಮಾಜಿಕ ಸಂಘಟನೆ ನೀತಿ ತಂಡಕ್ಕೆ ದೊರೆತ ಮಾಹಿತಿ ಹಿನ್ನೆಲೆಯಲ್ಲಿ ಬಚ್ ಪನ್ ಬಚಾವೋ ಸಂಸ್ಥೆಯು, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶಕರಿಗೆ ನೀಡಿದ ದೂರು ಆಧರಿಸಿ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶಕ ಪಲ್ಲವಿ ಆಕುರಾತಿ ಐಎಎಸ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಂದ ಘಟನೆಯ ವಿವರ ಪಡೆದು ದಾಳಿ ನಡೆಸಿ ಮಕ್ಕಳನ್ನು ರಕ್ಷಣೆ ಮಾಡುವಂತೆ ಆದೇಶಿಸಿದ್ದರು.

ಈ ಆದೇಶದ ಮೇರೆಗೆ ಬಚ್ ಪನ್ ಬಚಾವೋ ರಾಜ್ಯ ಸಮನ್ವಯಾಧಿಕಾರಿ ಬೆಂಗಳೂರಿನ ಬಿನು ವರ್ಗೀಸ್,  ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ ಅವರ ನೇತೃತ್ವದಲ್ಲಿ ಬಾಲ ಕಾರ್ಮಿಕ ಅಧಿಕಾರಿಗಳು, ಪುತ್ತೂರು ಕಾರ್ಮಿಕ ಇಲಾಖೆ ಅಧಿಕಾರಿಗಳು, ಸುಳ್ಯ ಸಿಡಿಪಿಓ, ಕಂದಾಯ ಅಧಿಕಾರಿಗಳು, ಸುಬ್ರಹ್ಮಣ್ಯ ಪೊಲೀಸರು, ಪಂಜ ಗ್ರಾಮ ಪಂಚಾಯತ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ ಮನೆಯಲ್ಲಿ ಕಾನೂನುಬಾಹಿರವಾಗಿ ಯಾವುದೇ ಅಧಿಕೃತ ದಾಖಲೆಗಳು ಇಲ್ಲದೇ ಮಾನಸಿಕ ಅಸ್ವಸ್ಥರು, ಮಹಿಳೆಯರು, ಪುಟ್ಟ ಮಕ್ಕಳನ್ನು ದುಡಿಸುತ್ತಿರೋದು ಕಂಡುಬಂದಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply