ಪೆಟ್ರೋಲ್ ಬಂಕ್ ಬಳಿಯಲ್ಲಿ ಪ್ರತಿಭಟನೆ

0

ಬಳ್ಳಾರಿ – ಸುಳ್ಳು ಹೇಳುತ್ತಲೇ ಬಿಜೆಪಿ ನಾಯಕರು ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ. ಮೊದಲೇ ಜನರು ಕೊರೊನಾ, ಲಾಕ್‌ಡೌನ್‌ನಿಂದ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಅಂಥದರಲ್ಲಿ ಅಗತ್ಯ ವಸ್ತುಗಳ ಬೆಲೆ ದಿನ ಕಳೆದಂತೆ ಗಗನಕ್ಕೇರುತ್ತಿದೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ಬೆಲೆ ೧೦೦ಕ್ಕೆ ಏರಿಕೆಯಾಗಿದೆ ಎಂದು ಸಿಂದಿಗೇರಿ ಗ್ರಾಪಂ ಅಧ್ಯಕ್ಷ ತುಬಾಕಿ ಮಲ್ಲಯ್ಯ ಹೇಳಿದರು.

ಕುರುಗೋಡು ಪಟ್ಟಣ ಸಮೀಪದ ಕೋಳೂರು ಕ್ರಾಸ್ನ  ಪೆಟ್ರೋಲ್ ಬಂಕ್ ಮುಂದೆ ಸಿಂದಿಗೇರಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಕೇಂದ್ರ ಸರಕಾರ ವಿರುದ್ಧ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ಯಲ್ಲಿ ಮಾತನಾಡಿದ ಅವರು,ಇದೇ ಪ್ರಧಾನಿ ನರೇಂದ್ರ ಮೋದಿಯ ಸಾಧನೆ. ರಾಜ್ಯ, ದೇಶದಲ್ಲಿ ಬಿಜೆಪಿ ಆಡಳಿತ ಸಂಪೂರ್ಣ ವಿಫಲವಾಗಿದೆ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ಬಡವರು ಒಪ್ಪೊತ್ತಿನ ಊಟಕ್ಕೂ ಪರದಾಡಬೇಕಾಗುತ್ತದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು. ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸುವ ಮೂಲಕ ೧೦೦ ರ ಗಡಿ ದಾಟುವಂತೆ ಮಾಡಿದ ಮೋದಿಯ ಭಾವಚಿತ್ರ ಹಿಡಿದು ವಿನೂತನವಾಗಿ ಪ್ರತಿಭಟನೆ ಮಾಡಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

 

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply