ಬಳ್ಳಾರಿಯಲ್ಲಿ ಕೆಸಿ ಕೊಂಡಯ್ಯಾ ನೇತ್ರತ್ವದಲ್ಲಿ ಪ್ರತಿಭಟನೆ

0

ಬಳ್ಳಾರಿ-  ದೇಶದಲ್ಲಿ ಪೆಟ್ರೋಲ್ ಡೀಸೆಲ್ ಹಾಗು ವಿದ್ಯುತ್ ಶಕ್ತಿ ದರ ಏರಿಕೆ ನಾಡಿದ ಹಿನ್ನೆಲೆಯಲ್ಲಿ ಇಂದು ಬಳ್ಳಾರಿಯಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಕೆಸಿ ಕೊಂಡಯ್ಯಾ ಅವರು ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆಯಲ್ಲಿ ಮಾತನಾಡಿದ ಕೆ ಸಿ ಕೊಂಡಯ್ಯಾ ಅವರು ವಿದ್ಯುತ್, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಮನಸೋಯಿಚ್ಛೆ ಏರಿಸುವ ಮೂಲಕ ಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ತಲೆಯ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಚಪ್ಪಡಿ ಎಳೆದಿವೆ, ಎಂದು ಬಿಜೆಪಿಯ ಕೇಂದ್ರ ಸರ್ಕಾರದ ವಿರುದ್ಧ ಕೆ ಸಿ ಕೊಂಡಯ್ಯ ರವರು ವಾಗ್ದಾಳಿ ನಡೆಸಿದರು.

ವಿದ್ಯುತ್ ದರವನ್ನು ರಾಜ್ಯ ಸರ್ಕಾರ ಕಳೆದ ಒಂದು ವರ್ಷದಲ್ಲಿ ಶೇ. 30ರಷ್ಟು ಏರಿಸಿದೆ. ಇದು ರಾಜ್ಯದ ಇತಿಹಾಸದಲ್ಲಿಯೇ ಮೊದಲು. ರಾಜ್ಯದಲ್ಲಿ ಉತ್ಪಾದನೆ ಹೆಚ್ಚಾಗಿದ್ದರೂ ಕೇಂದ್ರ ಸರ್ಕಾರ ಮತ್ತು ಅದಾನಿ ಕಂಪನಿಯಿಂದ ಹೆಚ್ಚು ದರಕ್ಕೆ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಅದಕ್ಷತೆ ಕಾರಣ.

ಮನಮೋಹನಸಿಂಗ್ ಅವರು ಪೆಟ್ರೋಲ್ ಬೆಲೆ ಕೇವಲ ರೂ.1 ಏರಿಕೆ ಮಾಡಿದಾಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಮೋದಿಯವರು ತೀವ್ರ ವಿರೋಧ ಮಾಡಿದ್ದರು. ಬಿಜೆಪಿ ದೇಶವ್ಯಾಪಿ ಪ್ರತಿಭಟನೆ ನಡೆಸಿತ್ತು. ಈಗ ನಿತ್ಯವೂ ದರ ಏರಿಕೆಯಾಗುತ್ತಲೇ ಇದೆ. ತಾವೇ ವಿರೋಧಿಸಿ, ಈಗ ತಾವೇ ಬೆಲೆಯೇರಿಕೆ ಮಾಡಲು ಬಿಜೆಪಿ ನಾಯಕರಿಗೆ ನಾಚಿಕೆಯಾಗಲ್ವೇ?

ಮನಮೋಹನಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ 125 ಡಾಲರ್ ಇತ್ತು. ಆಗ ಪೆಟ್ರೋಲ್, ಡೀಸೆಲ್ ದರವನ್ನು ಈ ಪ್ರಮಾಣದಲ್ಲಿ ಏರಿಕೆ ಮಾಡಿರಲಿಲ್ಲ. ಮೋದಿಯವರು ಪ್ರಧಾನಿಯಾದ ಬಳಿಕ ಒಂದು ಹಂತದಲ್ಲಿ ಕಚ್ಛಾ ತೈಲ ದರ 46-47 ಡಾಲರ್‌ಗೆ ಕುಸಿದಿತ್ತು. ಆಗ ಗ್ರಾಹಕರಿಗೆ ಕಡಿಮೆ ಬೆಲೆಗೆ ಕೊಟ್ಟಿದ್ದರೆ?  ಪೆಟ್ರೋಲ್, ಡೀಸೆಲ್ ಮಾರಾಟದ ಮೇಲಿನ ಅಬಕಾರಿ ಸುಂಕ 2013-14ರಲ್ಲಿ 3.45 ರೂ. ಹಾಗೂ 9.25 ರೂ. ಇತ್ತು. ಈಗ ಪೆಟ್ರೋಲ್ ಮಾರಾಟದ ಮೇಲೆ 31.84 ರೂ. ಡೀಸೆಲ್ ಮಾರಾಟದ ಮೇಲೆ, 32.98 ರೂ. ಹೆಚ್ಚಿಸಲಾಗಿದೆ.

ರಾಜ್ಯ ಸರ್ಕಾರ  ಪೆಟ್ರೋಲ್ ಮಾರಾಟದ ಮೇಲೆ ಶೇ. 35, ಡೀಸೆಲ್ ಮಾರಾಟದ ಮೇಲೆ ಶೇ. 24 ತೆರಿಗೆ ವಿಧಿಸುತ್ತಿದೆ. ಅಡುಗೆ ಅನಿಲದ ಸಿಲಿಂಡರ್ ಬೆಲೆ 414 ರೂ.ಗಳಿಂದ 850 ರೂ.ಗಳಿಗೆ ಏರಿಕೆಯಾಗಿದೆ. ಇದು ಲೂಟಿ ಅಲ್ಲದೇ ಮತ್ತೇನು? ಇದೇನಾ ಅಚ್ಛೇ ದಿನ್? ಎಂದು ಪ್ರಶ್ನೆ ಮಾಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply