ಗುಲಾಬಿ ಹೂ ನೀಡಿ ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ

0

ವಿಜಯಪುರ  – ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಇಂದು ವಿಜಯಪುರ ನಗರದಲ್ಲಿ ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ ಮಾಡಲಾಯಿತು. ನಗರ ಬಸವೇಶ್ವರ ವೃತ್ತದಲ್ಲಿರುವ ಪೆಟ್ರೋಲ್ ಬಂಕ್ ಗಳಲ್ಲಿ ವಾಹನ ಸವಾರರಿಗೆ ಗುಲಾಬಿ ಹೂ ನೀಡಿ ಬಿಜೆಪಿಗೆ ಮತ ಹಾಕಿದ್ದಕ್ಕೆ ತಮಗೆ ಅಭಿನಂದನೆಗಳ ತಿಳಿದರು. ಪೆಟ್ರೋಲ್ ಡಿಸೇಲ್ ದರ ಏರಿಕೆ ಯಿಂದ ಅಗತ್ಯ ವಸ್ತುಗಳ ಬೆಲೆ ಕೂಡ ಗಗನಕ್ಕೇರಿವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಒಬ್ಬ ವಾಹನ ಸವಾರ ಕಾಂಗ್ರೆಸ್‌ ಕಾರ್ಯಕರ್ತರೊಂದಿಗೆ ವಾಗ್ವಾದ ಮಾಡಿ ಕಳೆದ  70. ವರ್ಷ ಕಾಂಗ್ರೆಸ್ ಮಾಡಿದ ಸಾಲ ಇದು ಒಬ್ಬ ವ್ಯಕ್ತಿ ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದ ಘಟನೆ ನಡೆಯಿತು. ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾ ರಾಣಿ ತುಂಗಳ ಮಾತನಾಡಿ ಕೇಂದ್ರ ಸರಕಾರ ಹಾಗೂ ಪ್ರಧಾನಿ ಮೋದಿಯವರ ವಿರುದ್ದ ವಾಗ್ದಾಳಿ ಮಾಡಿದರು. ಕೇಂದ್ರ ಬಿಜೆಪಿ ಸರಕಾರದ “100 ನಾಟೌಟ್” ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ  ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply